Top Newsಸುದ್ದಿ

ಮುಸ್ಲಿಂ ದಂಪತಿಗೆ ವಿವಾಹ ಪ್ರಮಾಣ ಪತ್ರ – ವಕ್ಫ್‌ ಅಧಿಕಾರಕ್ಕೆ ಹೈಕೋರ್ಟ್‌ ತಡೆ

ಬೆಂಗಳೂರು: ಬೆಂಗಳೂರು: ಕರ್ನಾಟಕ ರಾಜ್ಯ ವಕ್ಫ್ ಮಂಡಳಿಗೆ ಮುಸ್ಲಿಮರ ವಿವಾಹ ನೋಂದಣಿ ಪ್ರಮಾಣಪತ್ರ ವಿತರಣೆಗೆ ಅನುವು ಮಾಡಿಕೊಟ್ಟು ಸರಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ ಗುರುವಾರ ತಡೆ ನೀಡಿದೆ.

ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಲಯ, ‘‘ಮುಸ್ಲಿಮರ ವಿವಾಹ ನೋಂದಣಿ ಪ್ರಮಾಣಪತ್ರ ವಿತರಣೆ ಅಧಿಕಾರವನ್ನು ಕರ್ನಾಟಕ ರಾಜ್ಯ ವಕ್ಫ್ ಮಂಡಳಿಗೆ ನೀಡಿ ರಾಜ್ಯ ಸರಕಾರದ ಅಲ್ಪಸಂಖ್ಯಾತ, ವಕ್ಫ್ ಮತ್ತು ಹಜ್‌ ಇಲಾಖೆ 2023ರ ಸೆ.30ರಂದು ಆದೇಶ ಹೊರಡಿಸಿದ್ದ ಆದೇಶಕ್ಕೆ ಜ.7ರವರೆಗೆ ತಡೆ ನೀಡಲಾಗುವುದು,’’ ಎಂದು ಹೇಳಿ ಮಧ್ಯಂತರ ಆದೇಶ ಹೊರಡಿಸಿತು.

ವಕ್ಫ್‌ ಕಾಯಿದೆ 1995 ಕ್ಕೆ ವಿರುದ್ಧವಾಗಿದೆ ಎಂದು ಅಲಂ ಪಾಷ ಅವರು ಪಿಎಎಲ್ ಹಾಕಿದ್ದರು. ಮುಖ್ಯ ನ್ಯಾಯಮೂರ್ತಿ ಎನ್.ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ ಅರವಿಂದ್ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತ್ತು. ಸಂಸತ್‌ ಚಳಿಗಾಲದ ಅಧಿವೇಶನದಲ್ಲಿವಿವಾದಿತ ವಕ್ಫ್ ತಿದ್ದುಪಡಿ ವಿಧೇಯಕ ಸೇರಿದಂತೆ 15 ವಿಧೇಯಕ ಮಂಡಿಸಲು ಸರಕಾರ ಸಿದ್ಧತೆ ನಡೆಸಿದೆ. ಸೋಮವಾರದಿಂದ ಆರಂಭವಾಗಲಿರುವ ಅಧಿವೇಶನದಲ್ಲಿಸಹಕಾರ ವಿಶ್ವವಿದ್ಯಾಲಯ ಸ್ಥಾಪನೆ ರೂಪಿಸಲಾದ ವಿಧೇಯಕ ಸೇರಿದಂತೆ ಐದು ನೂತನ ಕರಡು ವಿಧೇಯಕ ಮಂಡಿಸಲು ಸರಕಾರ ಚಿಂತನೆ ನಡೆಸಿದೆ.

Comments (0)

Your email address will not be published. Required fields are marked *

Back to top button