Friday, September 12, 2025
25 C
Bengaluru
Google search engine
LIVE
ಮನೆ#Exclusive NewsTop Newsವಾರಣಾಸಿಯ ರೈಲ್ವೆ ನಿಲ್ದಾಣದಲ್ಲಿ – 200 ದ್ವಿಚಕ್ರ ವಾಹನಗಳು ಭಸ್ಮ

ವಾರಣಾಸಿಯ ರೈಲ್ವೆ ನಿಲ್ದಾಣದಲ್ಲಿ – 200 ದ್ವಿಚಕ್ರ ವಾಹನಗಳು ಭಸ್ಮ

ಲಕ್ನೋ: ಉತ್ತರ ಪ್ರದೇಶದ  ವಾರಣಾಸಿಯ  ಕ್ಯಾಂಟ್ ರೈಲ್ವೆ ನಿಲ್ದಾಣದ ವಾಹನ ನಿಲುಗಡೆ ಪ್ರದೇಶದಲ್ಲಿ ಆಕಸ್ಮಿಕಬೆಂಕಿ ಕಾಣಿಸಿಕೊಂಡ ಪರಿಣಾಮ ಕನಿಷ್ಠ 200 ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಸುಮಾರು 12 ಅಗ್ನಿಶಾಮಕ ದಳ ವಾಹನಗಳು, ಜೊತೆಗೆ ಸರ್ಕಾರಿ ರೈಲ್ವೆ ಪೊಲೀಸ್  ರೈಲ್ವೆ ಪ್ರೊಟೆಕ್ಷನ್ ಫೋರ್ಸ್   ಮತ್ತು ಸ್ಥಳೀಯ ಪೊಲೀಸ್ ತಂಡ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಮಾರು 2 ತಾಸುಗಳ ಕಾಲ ಹರಸಾಹಸ ಪಟ್ಟು ಬೆಂಕಿ ನಂದಿಸಲಾಗಿದೆ ಎಂದು  ತಿಳಿಸಿದ್ದಾರೆ.

ಸಿಒ ಜಿಆರ್‌ಪಿ ಕುನ್ವರ್ ಬಹದ್ದೂರ್ ಸಿಂಗ್ ಮಾತನಾಡಿ, ಹಲವಾರು ದ್ವಿಚಕ್ರ ವಾಹನಗಳು ಸುಟ್ಟು ಹೋಗಿವೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ನಾವು ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ. ಸುಟ್ಟು ಕರಕಲಾದ ಬಹುತೇಕ ದ್ವಿಚಕ್ರ ವಾಹನಗಳು ರೈಲ್ವೆ ನೌಕರರಿಗೆ ಸೇರಿವೆ ಎಂದು ಮಾಹಿತಿ ನೀಡಿದ್ದಾರೆ.

 

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments