ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವೇದಿಕೆ ಮೇಲೆ ಕುಸಿದು ಬಿದ್ದಿದ್ದರು. ಸ್ವಲ್ಪ ಹೊತ್ತಿನ ವಿಶ್ರಾಂತಿಯ ಬಳಿಕ ತಮ್ಮ ಆರೋಗ್ಯದ ಬಗ್ಗೆ ಮಾತನಾಡಿದ್ದ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಅಧಿಕಾರದಿಂದ ಕೆಳಗೆ ಇಳಿಸುವವರೆಗೆ ನಾನು ಸಾಯುವುದಿಲ್ಲ ಎಂದಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ರಾಜನಾಥ್ ಸಿಂಗ್, ‘ಖರ್ಗೆ 125 ವರ್ಷ ಬದುಕುತ್ತಾರೆ. ಏಕೆಂದರೆ ಪ್ರಧಾನಿ ಮೋದಿ 125 ವರ್ಷ ಅಧಿಕಾರದಲ್ಲಿ ಇರುತ್ತಾರೆ’ ಎಂದಿದ್ದಾರೆ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಿಸುವವರೆಗೆ ನಾನು ಬದುಕುತ್ತೇನೆ ಎಂಬ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿವಾದಾತ್ಮಕ ಹೇಳಿಕೆಗೆ ಪ್ರತಿಕ್ರಿಯಿಸಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮಲ್ಲಿಕಾರ್ಜುನ ಖರ್ಗೆ ಅವರು 125 ವರ್ಷ ಬದುಕಲಿ ಮತ್ತು ಪ್ರಧಾನಿ ಮೋದಿ 125 ವರ್ಷಗಳ ಕಾಲ ಪ್ರಧಾನಿಯಾಗಿರಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
‘ಪ್ರಧಾನಿ ನರೇಂದ್ರ ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ನಾನು ಜೀವಂತವಾಗಿರುತ್ತೇನೆ’ ಎಂಬ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ವಾಗ್ವಾದ ನಡೆಯುತ್ತಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು (ಸೆಪ್ಟೆಂಬರ್ 30) ಹೇಳಿಕೆ ನೀಡಿದ್ದು, “ನಾನು ಕಾಂಗ್ರೆಸ್ ಮುಖ್ಯಸ್ಥರು 125 ವರ್ಷಗಳ ಕಾಲ ಬದುಕಲಿ ಮತ್ತು ಪ್ರಧಾನಿ ಮೋದಿ 125 ವರ್ಷಗಳ ಕಾಲ ಅಧಿಕಾರದಲ್ಲಿ ಇರುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ.” ಎಂದಿದ್ದಾರೆ.