Thursday, December 11, 2025
16.3 C
Bengaluru
Google search engine
LIVE
ಮನೆ#Exclusive Newsಎಂಬಿಬಿಎಸ್​ ವಿದ್ಯಾರ್ಥಿಯಿಂದ ಕ್ರೈಸ್ತ ಧರ್ಮಕ್ಕೆ ಮತಾಂತರವಾಗುವಂತೆ ಪ್ರೇರೇಪಣೆ!

ಎಂಬಿಬಿಎಸ್​ ವಿದ್ಯಾರ್ಥಿಯಿಂದ ಕ್ರೈಸ್ತ ಧರ್ಮಕ್ಕೆ ಮತಾಂತರವಾಗುವಂತೆ ಪ್ರೇರೇಪಣೆ!

ಕಲಬುರಗಿ: ಕೇರಳ ಮೂಲದ ಎಂಬಿಬಿಎಸ್​ ವಿದ್ಯಾರ್ಥಿ  ಕಲಬುರಗಿಯ ಇಎಸ್ಐ ಆಸ್ಪತ್ರೆಯಲ್ಲಿ ರೋಗಿಗಳಿಗೆ ಕ್ರೈಸ್ತ ಧರ್ಮಕ್ಕೆ  ಮತಾಂತರವಾಗುವಂತೆ ಪ್ರೇರೇಪಿಸುತ್ತಿದ್ದ ವಿಡಿಯೋ ವೈರಲ್​ ಆಗಿದೆ. ವಿದ್ಯಾರ್ಥಿ ಹಿನೋ ಡಾಲಿಚಾನ್​​ ರೋಗಿಗಳಿಗೆ ಕ್ರೈಸ್ತ ಧರ್ಮದ ಕರಪತ್ರಗಳನ್ನು ನೀಡಿ “ಔಷಧಿ ಹಾಗೂ ಇಂಜೆಕ್ಷನ್‌ನಿಂದ ನಿಮ್ಮ ರೋಗ ವಾಸಿಯಾಗುವುದಿಲ್ಲ. ಬದಲಾಗಿ ಕ್ರಿಶ್ಚಿಯನ್ ಧರ್ಮಕ್ಕೆ ಬನ್ನಿ. ಯೆಸುವಿನ ದಾರಿಯಲ್ಲಿ ನಡೆದು ನಿಮ್ಮ ರೋಗಗಳನ್ನ ದೂರ ಮಾಡಿಕೊಳ್ಳಿ” ಎಂದು ಅವರಿಗೆ ಹೇಳುತ್ತಿದ್ದನು.

ಆಗ ಹಿಂದೂ ಸಂಘಟನೆ ಕಾರ್ಯಕರ್ತರು ವಿದ್ಯಾರ್ಥಿಯನ್ನು ಹಿಡಿದು ತಪಾಸಣೆ ನಡೆಸಿದಾಗ, ಆತನ ಬ್ಯಾಗ್​ನಲ್ಲಿ ಕ್ರೈಸ್ತ್​ ಧರ್ಮದ ಕೆಲ ಅಂಶಗಳು ಮಳಯಾಳಂ ಮತ್ತು ಕನ್ನಡದಲ್ಲಿ ಬರೆದಿರುವ ಪುಸ್ತಕ ಪತ್ತೆಯಾಗಿದೆ. ವಿದ್ಯಾರ್ಥಿ ಹಿನೋ ಡಾಲಿಚಾನ್​ನನ್ನು ಹಿಂದೂ ಸಂಘಟನೆ ಕಾರ್ಯಕರ್ತರು‌ ತೀವ್ರ ತರಾಟೆಗೆ ತೆಗೆದುಕೊಂಡರು. ಮತಾಂತರಕ್ಕೆ ಯತ್ನಿಸುತ್ತಿದ್ದ  ವಿದ್ಯಾರ್ಥಿಯನ್ನು ಹಿನೋ ಡಾಲಿಚಾನ್ ವಿರುದ್ಧ ಹಿಂದೂ ಸಂಘಟನೆಗಳ ಕಾರ್ಯಕರ್ತರು ಗುಲ್ಬರ್ಗಾ ವಿವಿ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments