Top Newsರಾಜ್ಯಸುದ್ದಿ

ಬೆಂಗಳೂರಿನ ಈ ಏರಿಯಾಗಳಲ್ಲಿ ಮಾಂಸ ಮಾರಾಟ ನಿಷೇಧ! ಕಾರಣವೇನು ಗೊತ್ತಾ?

ಬೆಂಗಳೂರು: ರಾಜಧಾನಿಯಲ್ಲಿ ಇದೇ ಜನವರಿ 23 ರಿಂದ ಫೆಬ್ರವರಿ 17 ರವರೆಗೆ ಯಲಹಂಕ ವ್ಯಾಪ್ತಿಯಲ್ಲಿ ಮಾಂಸ ಮಾರಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಇನ್ನು ಈ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಕೂಡ ಬಿಬಿಎಂಪಿ ನೀಡಿದೆ.

ಯಲಹಂಕದಲ್ಲಿ ಫೆಬ್ರವರಿಯಲ್ಲಿ ಏರ್ ಶೋ ಇರುವುದರಿಂದ ಯಲಹಂಕದ 14 ಕಿಮೀ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧಿಸಿ ಪಾಲಿಕೆ ಸೂಚನೆ ನೀಡಿದೆ. ಯಲಹಂಕ ವಾಯುನೆಲೆಯಲ್ಲಿ ರಿಹರ್ಸಲ್ ಗಾಗಿ ವಿಮಾನಗಳ ಹಾರಾಟ ಹಿನ್ನೆಲೆ ಜನವರಿ 23 ರಿಂದ ಫೆಬ್ರವರಿ 17 ರವರೆಗೂ ಮಾಂಸ ಮಾರಾಟ ನಿಷೇಧ ಮಾಡಲಾಗಿದೆ.

ಯಲಹಂಕ ವ್ಯಾಪ್ತಿಯ 13 ಕಿಮಿ ಸುತ್ತಮುತ್ತ ಮಾಂಸ ಮಾರಾಟ ನಿಷೇಧಿಸಲಾಗಿದೆ. ಯಲಹಂಕ ವ್ಯಾಪ್ತಿಯ ಮಾಂಸ ಮಾರಾಟ ಹಾಗೂ ಉದ್ದಿಮೆಗಳನ್ನು ಬಂದ್ ಮಾಡಲು ಸೂಚನೆ ನೀಡಲಾಗಿದೆ. ನಿಮಯ ಉಲ್ಲಂಘನೆ ಮಾಡಿದರೆ ಬಿಬಿಎಂಪಿ ಕಾಯ್ದೆ 2020 ಮತ್ತು ಏರ್ ಕ್ರಾಫ್ಟ್ ರೂಲ್ಸ್ 1937 ಪ್ರಕಾರ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಯಲಹಂಕ ವಲಯ ಜಂಟಿ ಆಯುಕ್ತರಿಂದ ಸೂಚನೆ ನೀಡಿದ್ದಾರೆ.

Comments (0)

Your email address will not be published. Required fields are marked *

Back to top button