ರಾಜ್ಯ

ಬೆಳಗಾವಿಯಲ್ಲಿ ಮತ್ತೆ ಮುಂದುವರಿದ ಎಂಇಎಸ್ ಪುಂಡರ ಅಟ್ಟಹಾಸ

ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣದ ಬಳಿಕ ಎಂಇಎಸ್ ಪುಂಡರ ಅಟ್ಟಹಾಸ ಮತ್ತೆ ಮುಂದುವರಿದಿದೆ. ಮರಾಠಿಯಲ್ಲಿ ಪಹಣಿ ಕೊಡಲಿಲ್ಲ ಎಂದು ಗ್ರಾಮ ಪಂಚಾಯತಿ ಕಾರ್ಯದರ್ಶಿ ಮೇಲೆ ಹಲ್ಲೆ ನಡೆಸಿದ್ದಾರೆ.

ಬೆಳಗಾವಿ ತಾಲೂಕಿನ ಗೋಜಗಾ ಸಮೀಪ ಬೈಕ್ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದೆ. ಅಂಬೇವಾಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಚೇತನ್ ಪಾಟೀಲ್, ಹಾಲಿ ಅಧ್ಯಕ್ಷರ ಪುತ್ರ ವಿಕ್ರಮ್ ಯಳ್ಳೂರಕರ್ ಅವರ ಗ್ಯಾಂಗ್ ಹಲ್ಲೆ ಮಾಡಿದೆ ಎನ್ನಲಾಗಿದೆ.

ಅಂಬೇವಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ನಾಗಪ್ಪ ಎಂಬವರ ಮೇಲೆ, ತಾವು ಹೇಳಿದ ಕೆಲಸ ಮಾಡಿಲ್ಲ ಎಂಬ ಕಾರಣಕ್ಕೆ ಎಂಇಎಸ್ ಪುಂಡರು ದಾಳಿ ನಡೆಸಿದ್ದಾರೆ. ಅಲ್ಲದೆ ನಾವು ಹೇಳಿದ ಹಾಗೆ ನೀವು ಕೆಲಸ ಮಾಡಬೇಕು. ಇಲ್ಲದಿದ್ದರೆ ಲಂಚ ಪಡೆದಿದ್ದೀಯಾ ಎಂಬುದಾಗಿ ಕೇಸ್ ಹಾಕುತ್ತೇವೆ’ ಎಂದು ಹಲ್ಲೆಕೋರರು ಧಮ್ಕಿ ಹಾಕಿದ್ದಾರೆ. ಸದ್ಯ ಗಾಯಾಳು ನಾಗಪ್ಪ ಅವರನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನಡೆಸಿದ್ದಾರೆ.

 

Comments (0)

Your email address will not be published. Required fields are marked *

Back to top button