Freedom TV

ಆರೆಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ..!

ತಮಿಳುನಾಡು: ಇತ್ತೀಚಿನ ದಿನಗಳಲ್ಲಿ ದೇಶದ ಬಹುತೇಕ ಭಾಗಗಳು ವಿಪರೀತ ಶಾಖದ ಹಿಡಿತದಲ್ಲಿದ್ದು, ಪಶ್ಚಿಮ ಬಂಗಾಳದಿಂದ ಒಡಿಶಾ, ಬಿಹಾರ, ಉತ್ತರ ಪ್ರದೇಶ ಮತ್ತು ರಾಜಸ್ಥಾನದಿಂದ ತೆಲಂಗಾಣ, ತಮಿಳುನಾಡು, ಕರ್ನಾಟಕದವರೆಗೆ ಬಿಸಿಲಿನ ಅಬ್ಬರ ಮುಂದುವರಿದಿದೆ.

ಮತ್ತೊಂದೆಡೆ, ಈಶಾನ್ಯ ಭಾರತದ ಬಹುತೇಕ ರಾಜ್ಯಗಳಲ್ಲಿ ಧಾರಾಕಾರ ಮಳೆಯ ಬಗ್ಗೆ ಎಚ್ಚರಿಕೆ ನೀಡಲಾಗಿದ್ದು, ಹವಾಮಾನ ಇಲಾಖೆ ಅರುಣಾಚಲ ಪ್ರದೇಶ ಮತ್ತು ಇತರ ರಾಜ್ಯಗಳಿಗೆ ಆರೆಂಜ್ ಅಲರ್ಟ್ ನೀಡಿದೆ.

ಹವಾಮಾನ ಇಲಾಖೆಯ ಪ್ರಕಾರ, ಮೇ 5, 2024 ರಂದು ಅರುಣಾಚಲ ಪ್ರದೇಶದಲ್ಲಿ ಧಾರಾಕಾರ ಮಳೆಯಾಗಬಹುದು. ಈ ಬಗ್ಗೆ ಎಚ್ಚರಿಕೆ ನೀಡಲಾಗಿದ್ದು, ಸ್ಥಳೀಯ ಆಡಳಿತ ಹಾಗೂ ಜನಸಾಮಾನ್ಯರು ಜಾಗೃತರಾಗಿರುವಂತೆ ಸೂಚನೆ ನೀಡಲಾಗಿದೆ.

ಫ್ರೀಡಂ ಟಿವಿಯಲ್ಲಿ ಜಾಹೀರಾತು ನೀಡಲು
ಈ ನಂಬರ್ ಗೆ ಸಂಪರ್ಕಿಸಿ
Phone Number : +91 9164072277
Email id : salesatfreedomtv@gmail.com

Comments (0)

Your email address will not be published. Required fields are marked *

Back to top button