ಬೆಂಗಳೂರು: ಬಸ್ ದರ ಏರಿಕೆ, ಮೆಟ್ರೋ ದರ ಏರಿಕೆಯಿಂದ ಬೇಸತ್ತಿರುವ ರಾಜ್ಯದ ಜನಕ್ಕೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ.
ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರಿಗೆ ಹಾಲಿನ ದರ ಏರಿಕೆ ಶಾಕ್ ದೊಡ್ಡ ಹೊರೆಯಾಗಿದೆ. ಸಚಿವ ಸಂಪುಟದಲ್ಲಿ ಹಾಲಿನ ದರ ಏರಿಕೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಹಾಲು ಒಕ್ಕೂಟ ಹಾಗೂ ರೈತರಿಂದ ಹಾಲು ದರ ಹೆಚ್ಚಳಕ್ಕೆ ಬೇಡಿಕೆ ನಿರಂತವಾಗಿ ಹೆಚ್ಚಿದ ಹಿನ್ನೆಲೆ ಪ್ರತಿ ಲೀಟರ್ ಹಾಲಿನ ದರ 4ರೂ. ಹೆಚ್ಚಳ ಮಾಡಲಾಗಿದೆ. ಹಾಲಿನ ದರ ಏರಿಕೆಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.
ಇತ್ತಿಚಿಗೆ ಕೆಎಂಎಫ್ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯನವರ ಜೊತೆ ಸಭೆ ನಡೆಸಿದ್ದರು. ಸಭೆಯಲ್ಲಿ ಸಿಎಂ ನಂದಿನಿ ಹಾಲಿನ ದರ ಏರಿಕೆಗೆ ಒಪ್ಪಿಗೆ ಸೂಚಿಸಿರಲಿಲ್ಲ. ರೈತರು ಹಾಗೂ ಒಕ್ಕೂಟಗಳಿಂದ ಹಾಲಿನ ದರ ಏರಿಕೆಗೆ ಒತ್ತಡ ಇದೆ ಎಂದು ಸಿಎಂಗೆ ಅಧಿಕಾರಿಗಳು ಮನವರಿಕೆ ಮಾಡಿಕೊಟ್ಟಿದ್ದರು. ಇದೀಗ ನಂದಿನಿ ಹಾಲಿನ ದರ ಪ್ರತಿ ಲೀಟರ್ಗೆ 4 ರೂ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.


