Freedom TV

ಹಾಲಿನ ದರ ಮತ್ತಷ್ಟು ಏರಿಕೆ?

ಬೆಂಗಳೂರು: ರಾಜ್ಯದಲ್ಲಿ ಹಾಲಿನ ದರ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಮಂಡಿಸಿದ ನಂತರ ಸರ್ಕಾರ ಹಾಲಿನ ದರವನ್ನು ಲೀಟರ್ ಗೆ 5 ರೂಪಾಯಿ ಹೆಚ್ಚಿಸುವ ಸಾಧ್ಯತೆ ಇದೆ. ಈ ಕುರಿತು ಪಶುಸಂಗೋಪನಾ ಸಚಿವರು ಮತ್ತು KMF ಅಧಿಕಾರಗಳ ನಡುವೆ ಚರ್ಚೆಯಾಗಿದೆ.

ಕಳೆದ ವರ್ಷ ರೈತರು ಹಾಗೂ ಹಾಲು‌ ಒಕ್ಕೂಟಗಳು ಪ್ರತಿ ಲೀಟರ್ ನಂದಿನಿ ಹಾಲಿನ ದರ 5 ರೂಪಾಯಿ ಏರಿಕೆ ಮಾಡುವಂತೆ KMF ಮನವಿ ಮಾಡಿದ್ದವು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು KMF ಅಧ್ಯಕ್ಷ ಭೀಮಾ ನಾಯ್ಕ್ ತಿಳಿಸಿದ್ದರು.

Comments (0)

Your email address will not be published. Required fields are marked *

Back to top button