Tuesday, January 27, 2026
24 C
Bengaluru
Google search engine
LIVE
ಮನೆ#Exclusive NewsTop NewsBJP ಹೇಳಲಿ ಮುಸ್ಲಿಮರಿಗೆ ಮತದಾನದ ಹಕ್ಕು ಬೇಡ : ಹೆಬ್ಬಾಳ್ಕರ್ ಸವಾಲು

BJP ಹೇಳಲಿ ಮುಸ್ಲಿಮರಿಗೆ ಮತದಾನದ ಹಕ್ಕು ಬೇಡ : ಹೆಬ್ಬಾಳ್ಕರ್ ಸವಾಲು

ಈ ರಾಷ್ಟ್ರದಲ್ಲಿ ಸಂವಿಧಾನ ಇಲ್ಲವೇ? ನಾವು ರಾಷ್ಟ್ರವ್ಯಾಪಿ ಸಂವಿಧಾನ ದಿನವನ್ನು ಸಂಭ್ರಮದಿಂದ ಆಚರಿಸಲಿಲ್ಲವೇ? ಸಂವಿಧಾನ ಎಲ್ಲರಿಗೂ ಅನ್ವಯವಾಗಬೇಕಲ್ಲವೇ?

ಸ್ವಾಮೀಜಿ ಹೇಳಿದ್ದನ್ನು ಬಿಜೆಪಿಯವರು ಹೇಳಲಿ ನೋಡೋಣ… ಸ್ವಾಮೀಜಿಗಳು ಇರುವುದು ಸಮಾಜದ ಸ್ವಾಸ್ಥ್ಯ ಕಾಪಾಡಲು ಸಲುವಾಗಿಯೇ ಹೊರತು, ಕೆಡಿಸಲು ಅಲ್ಲ. ಸ್ವಾಮೀಜಿಗಳ ಬಗ್ಗೆ ಮಾತನಾಡುವಷ್ಟು ಅರ್ಹತೆ ನನಗಿಲ್ಲ. ಅವರು ಸಮಾಜಕ್ಕೆ ಮಾರ್ಗದರ್ಶನ ನೀಡಬೇಕು. ಅಂಬೇಡ್ಕರ್ ಅವರ ಸಂವಿಧಾನದ ಅಡಿಯಲ್ಲಿ ನಾವೆಲ್ಲರೂ ಭಾರತದಲ್ಲಿ ಇದ್ದೇವೆ. ಈ ದೇಶದಲ್ಲಿ ರಾಷ್ಟ್ರಪತಿಯಿಂದ ಹಿಡಿದು ಸಾಮಾನ್ಯ ಜನರವರೆಗೆ ಎಲ್ಲರಿಗೂ ಒಂದೇ ಕಾನೂನು ಇದೆ ಎಂದು ಹೇಳಿದರು.

ಇದೇ ವೇಳೆ ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬರು ಸಾವನ್ನಪ್ಪಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಈ ಕುರಿತು ಶನಿವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆ ನಿಗದಿಯಾಗಿದೆ ಎಂದು ಹೇಳಿದರು.

ಬಳಿಕ ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿ ಕಳಪೆ ಗುಣಮಟ್ಟದ ಅಕ್ಕಿ ಅಥವಾ ಆಹಾರ ವಿತರಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವೆ ಎಚ್ಚರಿಕೆ ನೀಡಿದರು.

ರಾಜ್ಯದ ಅಂಗನವಾಡಿಗಳಿಗೆ 50 ವರ್ಷಗಳ ಇತಿಹಾಸವಿದ್ದು, 70,000 ಕೇಂದ್ರಗಳಲ್ಲಿ 35 ಲಕ್ಷ ಮಕ್ಕಳನ್ನು ನೋಡಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments