ತುಮಕೂರು :
ಸಚಿವ ಮಧು ಬಂಗಾರಪ್ಪ ಇದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ನಂದಿಹಳ್ಳಿ ಬಳಿ ತಡರಾತ್ರಿ ಅಪಘಾತ ಸಂಭವಿಸಿದ್ದು ಅದೃಷ್ಟವಶಾತ್, ಸಚಿವ ಮಧು ಬಂಗಾರಪ್ಪ ಅಪಾಯದಿಂದ ಪಾರಾಗಿದ್ದಾರೆ.

ಸಚಿವ ಮಧು ಬಂಗಾರಪ್ಪ ಬೆಂಗಳೂರು ಕಡೆಗೆ ಬರ್ತಿದ್ದ ವೇಳೆ, ಕಾರಿನ ಮುಂಭಾಗಕ್ಕೆ ಲಾರಿ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಯಾರಿಗೂ ಗಾಯಗಳು ಆಗಿಲ್ಲ ಎಂದು ತಿಳಿದು ಬಂದಿದೆ.

ಘಟನೆ ಬಳಿಕ ಸಚಿವ ಮಧು ಬಂಗಾರಪ್ಪ ಬೇರೊಂದು ಕಾರಿನಲ್ಲಿ ಬೆಂಗಳೂರಿಗೆ ತೆರಳಿದ್ರು. ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಆಗಿದೆ.
