ಬೆಳಗಾವಿ : ಬಿಜೆಪಿ MLC ಸಿ.ಟಿ.ರವಿ ಅವರೇ ಬೆದರಿಕೆ ಪತ್ರ ಸೃಷ್ಟಿಸಿ, ಕಟ್ಟು ಕಥೆ ಕಟ್ಟುತ್ತಿದ್ದಾರೆ ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಕಿಡಿಕಾಡಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, ಸಿ.ಟಿ ರವಿ ಅವರಿಗೆ ಲಕ್ಷ್ಮೀ ಹೆಬ್ಬಾಳಕರ ಅವರು ಬೆದರಿಕೆ ಪತ್ರ ಬರೆದಿದ್ದಾರೆ ಅಂತ ಎಲ್ಲಾ ಕಡೆ ಹೇಳಿಕೊಂಡು ಹೋಗುತ್ತಿದ್ದಾರೆ? ಡ್ರಾಮಾ ಮಾಸ್ಟರ್ ರವಿ ಅವರೇ ಬೆದರಿಕೆ ಪತ್ರ ಸೃಷ್ಟಿಸಿ, ಕಥೆ ಹೇಳುತ್ತಿದ್ದಾರೆ. ಅದನ್ನು ಕಾಂಗ್ರೆಸ್ ಮೇಲೆ ಕಟ್ಟುವ ಕೆಲಸ ಮಾಡುತ್ತಿದ್ದಾರೆ ಎಂದರು.
ಸಚಿವರು ತಮ್ಮ ಮನೆಗಳಲ್ಲಿ ಔತನಕೂಟ ಆಯೋಜಿಸಿರುವುದಕ್ಕೆ ಮಹತ್ವ ಕೊಡಬೇಕಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸತೀಶ ಜಾರಕಿಹೊಳಿ ಅವರ ಮನೆಗೆ ಊಟಕ್ಕೆ ಹೋಗಿದ್ದಾರೆ. ನನ್ನ ಮನೆಗೂ ಮುಖ್ಯಮಂತ್ರಿಗಳು ಊಟಕ್ಕೆ ಬಂದಿದ್ದಾರೆ. ವಿರೋಧ ಪಕ್ಷದವರು ಊಟಕ್ಕೆ ಬರುತ್ತಾರೆ. ನಾವೂ ಹೋಗುತ್ತೇವೆ. ಅದರಲ್ಲೇನು ತಪ್ಪು, ಅದಕ್ಕೆ ಅಷ್ಟೊಂದು ಮಹತ್ವ ಕೊಡುವ ಅಗತ್ಯವಿಲ್ಲ ಎಂದು ಹೇಳಿದರು.