ವಿಜಯಪುರ: ಚುನಾವಣೆ ಮುಗಿದ ತತಕ್ಷಣ ಬಾಗ್ಮನೆ ಡೆವಲಪರ್ಸ್‌ನ ಪಾಲುದಾರರ ಮತ್ತೊಂದು ಕಂಪನಿಯಾದ ವೈಗೈ ಇನ್ವೆಸ್ಟ್‌ಮೆಂಟ್‌ ಪ್ರೈ.ಲಿಗೆ ಬೆಂಗಳೂರಿನ ಡಿಫೆನ್ಸ್‌ ಎಸ್.ಇ.ಝಡ್‌ ಪಾರ್ಕ್​ನಲ್ಲಿ ಅಂದಾಜು 160 ಕೋಟಿ ರೂ. ಬೆಲೆಬಾಳುವ 8 ಎಕರೆ ಭೂಮಿ ನೀಡಲಾಗಿದೆ ಎಂಬ ಬಿಜೆಪಿ ಆರೋಪಕ್ಕೆ ಇದೀಗ ಸ್ವತಃ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್​ ರಗೇಟು ನೀಡಿದು, ನನ್ನ ಸಾಲಕ್ಕೂ ಹಾಗೂ ಬಾಗ್ಮನೆ ಡೆವಲಪರ್ಸ್‌ನ ಪಾಲುದಾರರ ಮತ್ತೊಂದು ಕಂಪನಿಯಾದ ವೈಗೈ ಇನ್ವೆಸ್ಟ್‌ಮೆಂಟ್‌ ಪ್ರೈ.ಲಿ ಗೆ ನೀಡಿರುವ ಜಮೀನಿನ ವಿಚಾರಕ್ಕೂ ಯಾವುದೇ ಸಂಬಂಧವೇ ಇಲ್ಲಾ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಬಿಜೆಪಿ ಆರೋಪದ ಬಗ್ಗೆ ಕಾರವಾಗಿ ಟ್ವೀಟ್​ ಮಾಡಿರುವ ಸಚಿವ ಎಂ.ಬಿ ಪಾಟೀಲ್, ಬಿಜೆಪಿ ಸುಳ್ಳಿನ ಕಂತೆ ಸುಳ್ಳೇ ಇವರ ಮನೆ ದೇವರು, ಜೋಕರ್ಸ್ ಆಫ್ ಬಿಜೆಪಿ ಎಂಬ ಪೋಸ್ಟ್ ಹಂಚಿಕೊಳ್ಳುವ ಮೂಲಕ ವಿವರವಾಗಿ ಬರೆದಿದ್ದಾರೆ. ರಾಜ್ಯ ಬಿಜೆಪಿಯವರಿಗೆ ವಿವೇಚನೆಯೇ ಇಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಕುಟುಕಿದ್ದಾರೆ.

ನಾನು ಬಾಗ್ಮನೆಯಿಂದ 4 ಕೋಟಿ ರೂ. ಸಾಲ ತೆಗೆದುಕೊಂಡಿದ್ದು 2001ರಲ್ಲಿ. ನೀವು ಬೊಬ್ಬೆ ಹೊಡೆಯುತ್ತಿರುವಂತೆ 2023 ರಲ್ಲೂ ಅಲ್ಲ, ಚುನಾವಣೆ ಖರ್ಚಿಗಾಗಿಯೂ ಅಲ್ಲ. ಅವೆಲ್ಲ ನಮ್ಮ ಕೌಟುಂಬಿಕ ವ್ಯವಹಾರ. ಅನೇಕ ಸಲ ಸಾಲ ಪಡೆದು, ವಾಪಸ್ ಕೂಡ ಕೊಟ್ಟಿದ್ದೇನೆ. ಬಾಕಿಯೂ ಇದೆ. ಬಿಜೆಪಿಯವರ ಆರೋಪಗಳು ಸತ್ಯಕ್ಕೆ ದೂರವಾದದ್ದು ಹಾಗೂ ಕುಚೇಷ್ಟೆ, ದುರುದ್ದೇಶದಿಂದ ಕೂಡಿವೆ. ಬಾಗ್ಮನೆ ಸಂಸ್ಥೆ ಮತ್ತು ನಮ್ಮ ಕುಟುಂಬದ ಒಡನಾಟಕ್ಕೂ ಸರ್ಕಾರದ ತೀರ್ಮಾನಕ್ಕೂ ಯಾವ ಸಂಬಂಧವೂ ಇಲ್ಲ ಎಂದಿದ್ದಾರೆ.

2021ರಲ್ಲಿ ಬಿಜೆಪಿ ಸರ್ಕಾರವೇ ತನ್ನ ಆದೇಶದಲ್ಲಿ ನಿಗದಿಪಡಿಸಿದ್ದ ಹಂಚಿಕೆ ದರವನ್ನೇ ವಿಧಿಸಲಾಗಿದೆ. ಇದರಲ್ಲಿ ಯಾವುದೇ ರಿಯಾಯಿತಿ ನೀಡಿಲ್ಲ. ನಿವೇಶನ ಹಂಚಿಕೆಗೆ ಪರಿಗಣಿಸುವ ಮಾನದಂಡ ಸಂಸ್ಥೆಯ ಅರ್ಹತೆ, ಸಾಮರ್ಥ್ಯ, ಅನುಭವ ಇತ್ಯಾದಿಯೇ ಹೊರತು ವ್ಯಕ್ತಿನಿಷ್ಠ ಮಾನದಂಡಗಳಲ್ಲ. ವಿವಿಧ ಇಲಾಖೆಗಳ ಉನ್ನತಾಧಿಕಾರಿಗಳನ್ನು ಒಳಗೊಂಡ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯ ಸಾಮೂಹಿಕ ಹಾಗೂ ಒಮ್ಮತದ ತೀರ್ಮಾನವೇ ಹೊರತು ವೈಯಕ್ತಿಕ ನಿರ್ಧಾರವಲ್ಲ ಎಂದು ಕಿಡಿಕಾರಿದ್ದಾರೆ.

ಅಲ್ಲದೆ, ಬಾಗ್ಮನೆಗೆ 2005, 2006 ಮತ್ತು 2009ರಲ್ಲೆಲ್ಲ ಅಂದಂದಿನ ಸರ್ಕಾರಗಳು ಕೈಗಾರಿಕಾ ಭೂಮಿ ನೀಡಿವೆ. 2009ರಲ್ಲಿ ಇದೇ ಬಾಗ್ಮನೆ ಸಮೂಹದ ಚಂದ್ರಾ ಡೆವಲಪರ್ಸ್​ಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ 25 ಎಕರೆ ಭೂಮಿ ನೀಡಿದ್ದಾಗ ನಿಮ್ಮದೇ ಸರ್ಕಾರ ಇತ್ತಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.

 

By Veeresh

Leave a Reply

Your email address will not be published. Required fields are marked *

Verified by MonsterInsights