ಗೋವಾ : ಕೇಂದ್ರ ಸಂಸದೀಯ ಸಚಿವ ಪ್ರಹ್ಲಾನಾದ್ ಜೋಶಿ ಅವರು ಇಂದು ಗೋವಾಕ್ಕೆ ತೆರಳಿದ್ದು, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಭೆ ನಡೆಸಿದ್ದಾರೆ.ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಸೇರಿದಂತೆ ಕೋರ್ ಕಮಿಟಿ ಸದಸ್ಯರು ಮತ್ತು ಅಲ್ಲಿನ ಬಿಜೆಪಿ ನಾಯಕರೊಂದಿಗೆ ಚುನಾವಣೆ ಸಿದ್ಧತೆ ಬಗ್ಗೆ ಮಹತ್ವದ ಚರ್ಚೆ ನಡೆಸಿದ್ದಾರೆ.
ಗೋವಾಕ್ಕೆ ಆಗಮಿಸಿದ ಸಚಿವ ಜೋಶಿ ಅವರಿಗೆ ಪಕ್ಷದ ಸ್ಥಳೀಯ ನಾಯಕರು ಉತ್ತರ ಗೋವಾ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಆತ್ಮೀಯ ಸ್ವಾಗತ ಕೋರಿದರು. ಕ್ಲಸ್ಟರ್ ಪ್ರವಾಸ್ ಕಾರ್ಯಕ್ರಮದ ಅಂಗವಾಗಿ ಉತ್ತರ ಗೋವಾಕ್ಕೆ ಜೋಶಿ ಭೇಟಿ ನೀಡಿದ್ದು, ಗೋವಾದ ಮುಖ್ಯಮಂತ್ರಿ ಜತೆ ಚರ್ಚೆ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿಯವರ ವಿಕಸಿತ ಭಾರತ ಸಂಕಲ್ಪದೊಂದಿಗೆ ಮುಂಬರುವ ಲೋಕಸಭೆ ಚುನಾವಣೆಗೆ ಪಕ್ಷವನ್ನು ಸನ್ನದ್ಧ ಗೊಳಿಸಲು ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಕೇಂದ್ರೀಕರಿಸಿ ಗೋವಾ ಸಿಎಂ ಜತೆ ಕೆಲ ಹೊತ್ತು ಚರ್ಚೆ ನಡೆಸಿದರು.