ಕಲಬುರಗಿ : ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ ಯುವ ಗುತ್ತಿಗೆದಾರ ಆತ್ಮಹತ್ಯೆಗೆ ಶರಣಾಗಿದ್ದಾನೆ. 7 ಪುಟಗಳ ಡೆತ್ನೋಟ್ ಬರೆದಿಟ್ಟು ಗುತ್ತಿಗೆದಾರ ಸಚಿನ್(26) ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿದ್ದು, ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಟ್ಟಿತೂಂಗಾವ್ ಗ್ರಾಮದ ಸಚಿನ್ ರುಂಡ-ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ರೈಲ್ವೆ ಟ್ರಾಕ್ ನಲ್ಲಿ ಪತ್ತೆಯಾಗಿದೆ. ಡೆತ್ ನೋಟ್ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಕಲಬುರಗಿ ಮಹಾನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್ ರಾಜು ಕಪನೂರು ವಿರುದ್ಧ ಕೆಲ ಗಂಭೀರ ಆರೋಪಗಳನ್ನು ಮಾಡಲಾಗಿದೆ.
15 ಲಕ್ಷಕ್ಕೂ ಹೆಚ್ಚು ಹಣ ಪಡೆದು ಟೆಂಡರ್ ನೀಡದೆ ವಂಚನೆ ಮಾಡಿದ್ದು, ಜೊತೆಗೆ 1 ಕೋಟಿ ರೂ. ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ರಾಜು ಕಪನೂರು ವಿರುದ್ಧ ಆರೋಪಿಸಲಾಗಿದೆ. ಡೆತ್ ನೋಟ್ನಲ್ಲಿ ಕಲಬುರಗಿಯ ಮಾಜಿ ಕಾರ್ಪೊರೇಟ್ ರವಿ ಕಪನೂರು, ನಂದಕುಮಾರ್ ನಾಗಭುಜಂಗೆ, ಗೋರಖನಾಥ್ ಸೇರಿ 6 ಜನರ ವಿರುದ್ಧ ಜೀವ ಬೆದರಿಕೆ ಆರೋಪ ಮಾಡಲಾಗಿದೆ. 15 ಲಕ್ಷಕ್ಕೂ ಅಧಿಕ ಹಣ ತೆಗೆದುಕೊಂಡು ಟೆಂಡರ್ ನೀಡದೇ ದೋಖಾ ಹಾಗೂ 1 ಕೋಟಿ ರೂಪಾಯಿ ನೀಡದಿದ್ರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ನೋಟ್ನಲ್ಲಿ ಉಲ್ಲೇಖಲಾಗಿದೆ.