Thursday, August 21, 2025
24.8 C
Bengaluru
Google search engine
LIVE
ಮನೆ#Exclusive Newsಶಾಸಕ ಮುನಿರತ್ನ ಹನಿಟ್ರ್ಯಾಪ್ ಖೆಡ್ಡ..! ಯಾರೆಲ್ಲಾ ಇದ್ದಾರೆ ಗೊತ್ತಾ..?

ಶಾಸಕ ಮುನಿರತ್ನ ಹನಿಟ್ರ್ಯಾಪ್ ಖೆಡ್ಡ..! ಯಾರೆಲ್ಲಾ ಇದ್ದಾರೆ ಗೊತ್ತಾ..?

ಶಾಸಕ ಮುನಿರತ್ನ ಅವರು ಇಬ್ಬರು ಮಾಜಿ ಮುಖ್ಯಂತ್ರಿಗಳನ್ನು ಹನಿಟ್ರ್ಯಾಪ್ ಮಾಡಿದ್ದಾರೆ. ನನಗೆ ಸರ್ಕಾದಿಂದ ಭದ್ರತೆ ಕೊಟ್ಟಲ್ಲಿ ನಾನು ಮಾಜಿ ಮುಖ್ಯಮಂತ್ರಿಗಳ ಹೆಸರನ್ನು ಹಾಗೂ ಸಂಬಂಧಿತ ವಿಡಿಯೋವನ್ನು ಕೊಡುವುದಾಗಿ ಮುನಿರತ್ನ ಅವರಿಂದ ಅತ್ಯಾಚಾರಕ್ಕೆ ಒಳಗಾಗಿದ್ದಾರೆಂದು ಹೇಳಲಾದ ಸಂತ್ರಸ್ತ ಮಹಿಳೆ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಂಸತ್ರ ಮಹಿಳೆ ಅವರು, ಮಾಜಿ ಸಿಎಂ ಇಬ್ಬರಿಗೆ ಹನಿಟ್ರ್ಯಾಪ್‌ ಮಾಡಿ ಟಾರ್ಚರ್ ನೀಡಿ ಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ ಎಂಬ ಸ್ಪೋಟಕ ಮಾಹಿತಿ ಹೇಳಿದ್ದಾರೆ. ಮುನಿರತ್ನ ಅವರ ಬಳಿ ಯಾವುದೇ ಮಾಧ್ಯಮಗಳ ಬಳಿಯೂ ಇಲ್ಲದಂತಹ ತುಂಬಾ ಅಡ್ವಾನ್ಸ್ಡ್ ಕ್ಯಾಮೆರಾಗಳಿವೆ. ನಮ್ಮಂಥವರ ಅಸಹಾಯಕತೆ ಬಳಸಿಕೊಂಡು ಮಾಜಿ ಸಿಎಂ, ಸಚಿವರು, ಶಾಸಕರು ಹನಿಟ್ರ್ಯಾಪ್ ವೀಡಿಯೋ ಮಾಡಿಸಿದ್ದಾರೆ. ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಹನಿಟ್ರ್ಯಾಪ್ ಮಾಡಿಸಿದ್ದಾರೆ. ಎಸಿಪಿ, ಸಿಪಿಐ ಅಧಿಕಾರಿಗಳನ್ನು ಹನಿಟ್ರ್ಯಾಪ್ ಮಾಡಿಸಿದ್ದಾರೆ. ನನ್ನ ಹಾಗೂ ಮುನಿರತ್ನ ಬ್ರೈನ್ ಮ್ಯಾಪಿಂಗ್ ಮಾಡಿಸಲಿ ಎಂದು ಅಶ್ವತ್ಥ ನಾರಾಯಣ, ಅಶೋಕ್ ಗೆ ಸಂತ್ರಸ್ಥೆ ಚಾಲೆಂಜ್ ಮಾಡಿದ್ದಾರೆ.

ಹನಿಟ್ರ್ಯಾಪ್ ಮಾಡುವುದಕ್ಕೆ ನನ್ನನ್ನು ಬಳಕೆ ಮಾಡಿಕೊಂಡಿಲ್ಲ, ಬೇರೆ ಮಹಿಳೆಯರನ್ನು ಬಳಸಿಕೊಂಡಿದ್ದಾರೆ. ಇದರಲ್ಲಿ ಯಾವುದೇ ಸಿನಿಮಾ ನಟಿಯರು ಇಲ್ಲ. ಇನ್ನು ಹನಿಟ್ರ್ಯಾಪ್‌ಗೆ ಬಳಸಿಕೊಳ್ಳಲಾದ ಸುಮಾರು ಐದಾರು ಸಂತ್ರಸ್ತ ಮಹಿಳೆಯರು ಹೆದರಿಕೊಂಡು ಸುಮ್ಮನಾಗಿದ್ದಾರೆ. ಅವರು ಕೂಡ ನನ್ನಂತೆಯೇ ಹೊರಗೆ ಬಂದರೆ ಎಲ್ಲ ಸತ್ಯಗಳೂ ಹೊರಗೆ ಬರಲಿವೆ ಎಂದು ಹೇಳಿದರು. ಅನೇಕ ಮಹಿಳೆಯರನ್ನು ಶಾಸಕ ಮುನಿರತ್ನ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಲವು ರಾಜಕೀಯ ನಾಯಕರ ಮೇಲೆ ಹನಿಟ್ರ್ಯಾಪ್ ಮಾಡಲು ಬಳಕೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ವಿಜಯೇಂದ್ರ 10 ನಿಮಿಷ ಅಪಾಯಿಂಟ್ ಮೆಂಟ್ ಬೇಕಿದೆ. ಹತ್ತೇ ಹತ್ತು ನಿಮಿಷ ಅವರ ಜೊತೆ ಮಾತಾಡಬೇಕು. ಇದಕ್ಕೆ ಅವಕಾಶ ಮಾಡಿಕೊಡಿ ಎಂದರು. ಇಷ್ಟೆಲ್ಲ ಆದ್ರೂ ಮುನಿರತ್ನ ಪಕ್ಷದಲ್ಲಿ ಇರಿಸಿಕೊಂಡಿದ್ದೀರಲ್ಲ ಎಂದು ಕೇಳಬೇಕಿದೆ ಎಂದು ಹೇಳಿದ್ದಾರೆ

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments