ಬೀದರ್: ಔರಾದ್ ಶಾಸಕ ಪ್ರಭು ಚವ್ಹಾಣ್ ಔರಾದ್ ಪಟ್ಟಣದಲ್ಲಿ ರೌಂಡ್ಸ್ ಹಾಕಿ ಸಾರ್ವಜನಿಕರ ಸಮಸ್ಯೆ ಆಲಿಸಿದ್ದಾರೆ. ವಾರ್ಡ್‌ಗಳಲ್ಲಿ ಚರಂಡಿಗಳ ಸ್ವಚ್ಛತೆ, ರಸ್ತೆ ವ್ಯವಸ್ಥೆ, ಕುಡಿಯುವ ನೀರು ಪೂರೈಕೆಯ ಬಗ್ಗೆ ಪರಿಶೀಲನೆ ನಡೆಸಿ, ಕೆಲವು ವಾರ್ಡ್ ಗಳಲ್ಲಿ ಅಸ್ವಸ್ಥತೆ ಕಂಡು ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ಚರಂಡಿ ನೀರಿನಿಂದ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಇರುತ್ತದೆ ಹೀಗಾಗಿ ಪಟ್ಟಣದ ಎಲ್ಲಾ ವಾರ್ಡ್‌ಗಳ ಚರಂಡಿ ಸ್ವಚ್ಛವಾಗಿರಬೇಕು. ಸ್ವಚ್ಛತಾ ಕಾರ್ಯಕ್ಕೆ ಸಿಬ್ಬಂದಿಯನ್ನ ನೇಮಿಸಿಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು. ಇನ್ನು ಕೆಲವು ವಾರ್ಡ್‌ಗಳಲ್ಲಿ ನೀರಿನ ಸಮಸ್ಯೆ ಇದ್ದು. ಪ್ರತಿದಿನ ಸಮರ್ಪಕವಾಗಿ ನೀರು ಪೂರೈಸಬೇಕೆಂದು ಅಧಿಕಾರಿಗೆ ಸೂಚನೆ ನೀಡಿದರು. ಬಳಿಕ ಶಾಲೆ ಹಾಗು ಪಟ್ಡಣದ ಪಶು ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಕಂಡು ಅಧಿಕಾರಿ ವಿರುದ್ಧ ಗರಂ ಆಗಿದ್ದಾರೆ. ಪಶು ವೈದ್ಯಾಧಿಕಾರಿಗಳು ಗೈರಾಗಿದ್ದಕ್ಕೆ ಪಶು ಇಲಾಖೆ ಉಪ ನಿರ್ದೇಶಕರಿಗೆ ಕರೆ ಮಾಡಿ ವೈದ್ಯಾಧಿಕಾರಿಗಳು, ಸಿಬ್ಬಂದಿ ಕಡ್ಡಾಯವಾಗಿ ಹಾಜರು ಇರುಬೇಕೆಂದು ಹೇಳಿದರು. ಇದೇ ವೇಳೆ ಕ್ಷೇತ್ರದಲ್ಲಿ 1.23 ಕೋಟಿಯ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.