ರಾಜಕೀಯ

ಅಕ್ರಮ ಗಣಿಗಾರಿಕೆ ನಿರ್ದಾಕ್ಷಿಣ್ಯವಾಗಿ ಮಟ್ಟ ಹಾಕಬೇಕು – ‘ಫ್ರೀಡಂ ಟಿವಿ’ಗೆ ಶಾಸಕ STS ಪ್ರತಿಕ್ರಿಯೆ!

Illegal mining must be ruthlessly eradicated - MLA STS's response to 'Freedom TV'!

ಬೆಂಗಳೂರು : ಕಲ್ಲು ಕ್ವಾರಿಯಲ್ಲಿ ನಡೆದ ಭೀಕರ ದುರಂತದಲ್ಲಿ ಏಳು ಮಂದಿ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆಗೆ ಶಾಸಕ ಎಸ್.ಟಿ. ಸೋಮಶೇಖರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಕ್ರಮ ಗಣಿಗಾರಿಕೆ ನಡೆಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಎಸ್.ಟಿ. ಸೋಮಶೇಖರ್ ಆಗ್ರಹಿಸಿದ್ದಾರೆ.

‘ಫ್ರೀಡಂ ಟಿವಿ’ಯೊಂದಿಗೆ ಮಾತನಾಡಿದ ಶಾಸಕ ಎಸ್.ಟಿ. ಸೋಮಶೇಖರ್ ಅವರು, ಈ ದುರಂತಕ್ಕೆ ಗಣಿ ಮಾಲೀಕರ ಸಂಪೂರ್ಣ ಬೇಜವಾಬ್ದಾರಿಯೇ ಕಾರಣ ಎಂದು ಕಿಡಿಕಾರಿದ್ದಾರೆ.

ಸರ್ಕಾರಕ್ಕೆ ಶಾಸಕರ ಗಡುವು

ಎಸ್.ಟಿ. ಸೋಮಶೇಖರ್ ಅವರು, ಈ ಪ್ರಕರಣದಲ್ಲಿ ಯಾವುದೇ ಮುಲಾಜಿಲ್ಲದೆ ಅಕ್ರಮ ಗಣಿಗಾರಿಕೆಯನ್ನು ಮಟ್ಟ ಹಾಕಬೇಕು. ದುರಂತಕ್ಕೆ ಕಾರಣರಾದ ಗಣಿ ಮಾಲೀಕರನ್ನು ಕೂಡಲೇ ಬಂಧಿಸಬೇಕು. ಒಂದು ವೇಳೆ ಸರ್ಕಾರ ಈ ಬಗ್ಗೆ ತಕ್ಷಣವೇ ಕ್ರಮ ಕೈಗೊಳ್ಳದಿದ್ದರೆ, ನಾನು ಸುಮ್ಮನಿರುವುದಿಲ್ಲ. ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂದೆ ಧರಣಿ ಮಾಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.

ಮುಖ್ಯಮಂತ್ರಿ ಮತ್ತು ಡಿಸಿಎಂಗೆ ಆಗ್ರಹ

ಈ ಗಂಭೀರ ಪ್ರಕರಣವನ್ನು ರಾಜ್ಯ ಸರ್ಕಾರವು ಅತ್ಯಂತ ತುರ್ತಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿರುವ ಅವರು, ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಈ ಕೂಡಲೇ ಮಧ್ಯಪ್ರವೇಶಿಸಿ, ಮೃತರ ಕುಟುಂಬಗಳಿಗೆ ನ್ಯಾಯ ಒದಗಿಸಬೇಕು ಮತ್ತು ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.

Comments (0)

Your email address will not be published. Required fields are marked *

Back to top button