ಉಡುಪಿ: ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಮಂಗಳೂರು ದಿನೇಶ್ ಅವರು ಕುಂದಾಪುರದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.
ಆ ದಿನಗಳು, ಕೆಜಿಎಫ್, ಉಳಿದವರು ಕಂಡಂತೆ, ಕಿಚ್ಚ, ಕಿರಿಕ್ ಪಾರ್ಟಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ದಿನೇಶ್ ಮಂಗಳೂರು ನಟನೆ ಮಾಡಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಬಹುಬೇಡಿಕೆಯ ಪೋಷಕ ನಟನಾಗಿ ಗುರುತಿಸಿಕೊಂಡಿದ್ದರು. ದಿನೇಶ್ ಮಂಗಳೂರು ನಿಧನಕ್ಕೆ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ದಿನೇಶ್ ಮಂಗಳೂರು ಅವರು ಅಪಾರ ಅನುಭವವನ್ನು ಹೊಂದಿದ್ದರು. ಕಾಂತಾರ ಚಿತ್ರದ ಶೂಟಿಂಗ್ ವೇಳೆ ಪಾರ್ಶ್ವವಾಯುಗೆ ತುತ್ತಾಗಿದ್ದರು. ಬಳಿಕ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಆದ್ರೆ ಕಳೆದ ಒಂದು ವಾರದ ಹಿಂದೆ ಮತ್ತೆ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು ಅಂಕದಕಟ್ಟೆ ಸರ್ಜನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರು ದಿನೇಶ್ ಮರಣ ಹೊಂದಿದ್ದಾರೆ.
ದಿನೇಶ್ ಅವರು 1984ರಲ್ಲಿ ಜನಿಸುತ್ತಾರೆ. ದಿನೇಶ್ ಕಾಲಸಸಿ ವೆಂಕಟೇಶ್ ಪೈ ಎಂಬುದು ಅವರ ಮೂಲ ಹೆಸರು. ಬಣ್ಣದ ಲೋಕಕ್ಕೆ ಬಂದ ಬಳಿಕ ದಿನೇಶ್ ಮಂಗಳೂರು ಹೆಸರಿನಿಂದ ಪ್ರಸಿದ್ಧರಾಗಿದ್ದರು.