ಬೆಂಗಳೂರು: ಯುವಕನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಎಂಎಲ್‌ಸಿ ಸೂರಜ್ ರೇವಣ್ಣ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸೂರಜ್ ರೇವಣ್ಣ ವಿರುದ್ಧ ಹಾಸನ ಜಿಲ್ಲೆಯ ಹೊಳೆ ನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಾಗಿತ್ತು. ಐಪಿಸಿ ಸೆಕ್ಷನ್ 377, 342, 506, 34 ರ ಅಡಿ ಸೂರಜ್ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಗೆ ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.
ಅಸಹಜ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಸೂರಜ್ ರೇವಣ್ಣ ಅವರನ್ನು ಹಾಸನದಲ್ಲಿ ಪೊಲೀಸರು ಬಂಧಿಸಿದ್ದಾರೆ. ವೈದ್ಯಕೀಯ ಪರೀಕ್ಷೆಗಾಗಿ ಅವರನ್ನು ಇಂದು ಆಸ್ಪತ್ರೆಗೆ ಹಾಜರುಪಡಿಸಲಾಗಿದೆ.
ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com