Wednesday, January 28, 2026
24.9 C
Bengaluru
Google search engine
LIVE
ಮನೆ#Exclusive NewsTop Newsಮಹಾಕುಂಭಮೇಳದ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ ಪ್ರಧಾನಿ ಮೋದಿ

ಮಹಾಕುಂಭಮೇಳದ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ ಪ್ರಧಾನಿ ಮೋದಿ

ನವದೆಹಲಿ: ಇಂದು ರಾಷ್ಟ್ರ ರಾಜಧಾನಿ ದೆಹಲಿಗೆ ಚುನಾವಣೆ ನಡೆಯುತ್ತಿದ್ದು. ಇದರ ಬೆನ್ನಲೆ ನರೇಂದ್ರ ಮೋದಿ ಇಂದು ಪ್ರಯಾಗ್​ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಭೇಟಿ ನೀಡಿದ್ದು. ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ. ಈ ವೇಳೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಮೋದಿಗೆ ಸಾಥ್​ ನೀಡಿದರು.

ಈ ಭೇಟಿಯ ಸಮಯದಲ್ಲಿ, ಪ್ರಧಾನಿ ಮೋದಿ ಸಂತರೊಂದಿಗೆ ಸಂವಹನ ನಡೆಸುವ ನಿರೀಕ್ಷೆಯಿದೆ. ಜೊತೆಗೆ 2025 ರ ಮಹಾಕುಂಭದಲ್ಲಿ ಭಾಗವಹಿಸುವ ಲಕ್ಷಾಂತರ ಯಾತ್ರಾರ್ಥಿಗಳಿಗೆ ಮಾಡಲಾದ ವ್ಯವಸ್ಥೆಗಳನ್ನು ಪರಿಶೀಲಿಸುತ್ತಾರೆ. ಪ್ರಧಾನಿಗಳ ಆಗಮನದ ಹಿನ್ನೆಯಲ್ಲಿ ಪ್ರಯಾಗ್‌ ರಾಜ್‌ನಲ್ಲಿ ಬಿಗಿ ಬಂದೋಬಸ್ತ್‌ ಹೆಚ್ಚು ಮಾಡಲಾಗಿದೆ.

ಮಹಾ ಕುಂಭ ಮೇಳದ ಮೌನಿ ಅಮಾವಾಸ್ಯೆಯ ಕಾಲ್ತುಳಿತದಲ್ಲಿ 30 ಭಕ್ತರು ಬಲಿಯಾದ ಘಟನೆಯಿಂದ ಎಚ್ಚೆತ್ತುಕೊಂಡಿರುವ ಉತ್ತರ ಪ್ರದೇಶ ಸರ್ಕಾರ ಭಕ್ತರ ರಕ್ಷಣೆಗೆ ಮತ್ತಷ್ಟು ಭದ್ರತೆ ಹೆಚ್ಚಿಸಿದೆ. ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳನ್ನು ನೇಮಿಸಿದೆ. ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿನ್ನೆಯೇ ಪ್ರಯಾಗ್​ರಾಜ್​ಗೆ ಭೇಟಿ ನೀಡಿದ್ದು, ವ್ಯವಸ್ಥೆ ಬಗ್ಗೆ ಮಾಹಿತಿ ಪಡೆದಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments