ನವದೆಹಲಿ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಹೊನ್ನಳ್ಳಿಯ ತುಳಸಿ ಗೌಡ  ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಮೋದಿ ಬೇಸರ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಗೌರವಾನ್ವಿತ ಪರಿಸರವಾದಿ ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತ ತುಳಸಿ ಗೌಡ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಪ್ರಕೃತಿಯನ್ನು ಪೋಷಿಸಲು, ಸಾವಿರಾರು ಸಸಿಗಳನ್ನು ನೆಡಲು ಮತ್ತು ನಮ್ಮ ಪರಿಸರವನ್ನು ಸಂರಕ್ಷಿಸಲು ಅವರು ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಇವರು ಪರಿಸರ ಸಂರಕ್ಷಣೆಗೆ ಮಾರ್ಗದರ್ಶಕ ಬೆಳಕಾಗಿ ಉಳಿಯುತ್ತಾರೆ. ಅವರ ಕೆಲಸ ನಮ್ಮ ಭೂಮಿಯನ್ನು ರಕ್ಷಿಸಲು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ ಎಂದು ಬರೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

Verified by MonsterInsights