ಪ್ರಧಾನಿ ನರೇಂದ್ರ ಮೋದಿ ಅವರು ಭಾರತವನ್ನು 2047ಕ್ಕೆ ಅಭಿವೃದ್ಧಿ ಹೊಂದಿದ ದೇಶವಾಗಿಸಲು ಸಂಕಲ್ಪ ತೊಟ್ಟಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿ ಆಯೋಜಿಸಿದ ‘ವೀರಶೈವ ಲಿಂಗಾಯತ ಗ್ಲೋಬಲ್ ಬಿಜಿನೆಸ್ ಕಾನಕ್ಲೇವ್-2024’ ಕಾರ್ಯಕ್ರಮದಲ್ಲಿ ಮಾತನಾಡಿದರು.ವಿಕಸಿತ ಭಾರತಕ್ಕೆ ತಮ್ಮ ದೂರದೃಷ್ಟಿ ಹಾಗೂ ಅವಿಸ್ಮರಣೀಯ ಕಾರ್ಯ ವೈಖರಿಯಿಂದ ಮೋದಿಜಿ ಈಗಾಗಲೇ ಅಡಿಪಾಯ ಹಾಕಿದ್ದಾರೆ. ಭಾರತ ಮೋದಿಜಿ ಅವರ ಮಹೋನ್ನತ ಕನಸು ಎಂದು ಜೋಶಿ ಬಣ್ಣಿಸಿದರು.
ಸ್ವಾತಂತ್ರ್ಯ ಸಿಕ್ಕು 75 ವರ್ಷವಾದರೂ ನಾವಿನ್ನೂ ಅಭಿವೃದ್ಧಿ ಹೊಂದಿರುವ ದೇಶ ಎನಿಸಿಕೊಂಡಿದೆ. ಇನ್ನು ಮೇಲೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಹೊರ ಹೊಮ್ಮಲಿದೆ ಎಂದರು. ಈಗ ಆರ್ಥಿಕವಾಗಿ 5ನೇ ಸ್ಥಾನದಿಂದ 3ನೇ ಸ್ಥಾನಕ್ಕೆ ಹೆಜ್ಜೆ ಇಡುತ್ತಿದ್ದೇವೆ. ಇನ್ನು 20 ವರ್ಷಗಳಲ್ಲಿ ಅಭಿವೃದ್ಧಿಶೀಲ ರಾಷ್ಟ್ರವಾಗಿ ಭಾರತ ಮೊದಲಿರುತ್ತದೆ.
ಮೋದಿ ಚಿಂತನೆಯುಳ್ಳ ಪ್ರಧಾನಿ ನರೇಂದ್ರ ಮೋದಿ ಅವರು ಚಿಂತೆ ಮಾಡುವವರಲ್ಲ. ಚಿಂತನೆ ಮಾಡುವ ಪ್ರಧಾನಿಯಾಗಿದ್ದಾರೆ. ತಾವು ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ ಇಲಾಖೆಗಳಲ್ಲಿ ಏನಿರಬೇಕು?, ಹೇಗಿರಬೇಕು? ಎಂಬುದನ್ನು ಈಗಾಗಲೇ ಅಧಿಕಾರಿಗಳು ವರ್ಗಕ್ಕೆ ಸಲಹೆ- ಸೂಚನೆ ನೀಡಿದ್ದಾರೆ .
ಜಗತ್ತಿನ ವಿವಿಧ ದೇಶಗಳಲ್ಲಿ ಲಿಂಗಾಯತ ವೀರಶೈವರು ಉದ್ದಿಮೆಗಳನ್ನು ಸ್ಥಾಪಿಸಿ ಉದ್ಯೋಗ ಕಲ್ಪಿಸುವಲ್ಲಿ ಮುಂಚೂಣಿಯಲ್ಲಿ ಇದ್ದಾರೆ. ಸಮಾಜದ ಯುವ ಪೀಳಿಗೆ ಸಹ ಇದನ್ನು ಅನುಸರಿಸಬೇಕು ಎಂದು ಜೋಶಿ ಕರೆ ನೀಡಿದರು.ಅಂತಾರಾಷ್ಟ್ರೀಯ ಬ್ಯುಸಿನೆಸ್ ಸಮಾವೇಶಗಳ ಆಯೋಜನೆಯಿಂದ ಯುವ ಜನತೆಯ ಉನ್ನತಿಗೆ ಮಾರ್ಗದರ್ಶನ ದೊರೆಯುತ್ತದೆ ಎಂದು ಅಭಿಪ್ರಾಯಿಸಿದರು.