ಉತ್ತರಕನ್ನಡ: ಈ ಬಾರಿ ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ ಎಂದು ಸಿ.ಎಂ.ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು.
ಉತ್ತರಕನ್ನಡ ಜಿಲ್ಲೆ ಲೋಕಸಭಾ ಕ್ಷೇತ್ರದ ಮುಂಡಗೋಡು ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಅವರ ಗೆಲುವಿನ ಸಂದೇಶ ನೀಡಿ ಜನಸಮಾವೇಶದಲ್ಲಿ ಮಾತನಾಡಿದರು. ಉತ್ತರಕನ್ನಡ ಜಿಲ್ಲೆಯ ಜನ ರಾಜಕೀಯವಾಗಿ ಪ್ರಜ್ಞಾವಂತರು. ನುಡಿದಂತೆ ನಡೆಯುವವರನ್ನು ಗುರುತಿಸುವ ಪ್ರಜ್ಞಾವಂತಿಕೆ ಇವರಿಗಿದೆ ಎಂದು ಸಿ.ಎಂ.ಸಿದ್ದರಾಮಯ್ಯ ಮೆಚ್ಚುಗೆ ಸೂಚಿಸಿದರು.
ವೃತ್ತಿಯಲ್ಲಿ ವೈದ್ಯೆ ಆಗಿರುವ ಮರಾಠ ಸಮುದಾಯದ ಸಜ್ಜನ ಮತ್ತು ಜನಪರ ಕಾಳಜಿ ಇರುವ ಮಹಿಳೆ ಈ ಬಾರಿ ನಿಮ್ಮ ಪ್ರತಿನಿಧಿಯಾಗಿದ್ದಾರೆ. ಇವರಿಗೆ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಿ ದೆಹಲಿಗೆ ಕಳುಹಿಸಿ. ನಿಮ್ಮ ಎಲ್ಲಾ ಬೇಡಿಕೆಗಳ ಬಗ್ಗೆ ಪಾರ್ಲಿಮೆಂಟಿನಲ್ಲಿ ಹೋರಠ ನಡೆಸಿ ನಿಮಗೆ ಸ್ಪಂದಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸುಳ್ಳರು ಯಾರು, ಭಾರತೀಯರನ್ನು ನಂಬಿಸಿ ದ್ರೋಹ ಬಗೆದವರು ಯಾರು ಎನ್ನುವುದನ್ನು ಅರ್ಥ ಮಾಡಿಕೊಳ್ಳುವಷ್ಟು ತಿಳಿವಳಿಕೆ ಈ ಜಿಲ್ಲೆಯ ಜನತೆಗೆ ಇದೆ. ಹೀಗಾಗಿ ಈ ಬಾರಿ ಅತ್ಯಂತ ಪ್ರಜ್ಞಾವಂತಿಕೆಯಿಂದ ಮತದಾನ ಮಾಡ್ತಾರೆ ಎಂದು ಖಚಿತವಾಗಿ ನುಡಿದರು.
ನನಗೆ ಅಧಿಕಾರ ಕೊಡಿ. 100 ದಿನದಲ್ಲಿ ವಿದೇಶದಲ್ಲಿರುವ ಕಪ್ಪುಹಣ ತಂದು ಪ್ರತಿಯೊಬ್ಬ ಭಾರತೀಯರ ಖಾತೆಗೆ 15 ಲಕ್ಷ ಹಾಕ್ತೀವಿ ಅಂದಿದ್ದ ಮೋದಿ ಹತ್ತತ್ತು ವರ್ಷ ನಿಮಗೆಲ್ಲಾ ಮೂರು ನಾಮ ಹಾಕುತ್ತಾ ತಿರುಗಿದ್ರು. ಇಂಥಾ ಸುಳ್ಳುಕೋರ ಮುಖ ನೋಡಿ ಮತ ಹಾಕಿದ್ರೆ ನಿಮ್ಮ ಮತಕ್ಕೆ ಗೌರವ ಬರುತ್ತದೆಯೇ ಎಂದು ಪ್ರಶ್ನಿಸಿದರು.
ಫ್ರೀಡಂ ಟಿವಿಯಲ್ಲಿ ಜಾಹೀರಾತು ನೀಡಲು
ಈ ನಂಬರ್ ಗೆ ಸಂಪರ್ಕಿಸಿ
Phone Number : +91 9164072277
Email id : salesatfreedomtv@gmail.com