Top Newsಕ್ರೈಂ ಸ್ಟೋರಿರಾಜ್ಯಸುದ್ದಿ

ಅತ್ತೆಯ ಮೇಲೆ ಹಲ್ಲೆ ಕೇಸ್​; ಡಾಕ್ಟರ್​ಗೆ ಶೋಕಾಸ್ ನೋಟಿಸ್​..!

ವೃದ್ಧ ಅತ್ತೆಯ ಮೇಲೆ ಹಲ್ಲೆ ನಡೆಸಿ, ಕಿರುಕುಳ ನೀಡಿದ ಆರೋಪದ ಮೇಲೆ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯೆಗೆ ವೈದ್ಯಕೀಯ ಶಿಕ್ಷಣ ಇಲಾಖೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ತುರ್ತು ವೈದ್ಯಕೀಯ ಅಧಿಕಾರಿ ಡಾ.ಪ್ರಿಯದರ್ಶಿನಿ ಅವರು ತಮ್ಮ ಅತ್ತೆಯ ಮೇಲೆ ಹಲ್ಲೆ ನಡೆಸಿದ ವಿಡಿಯೋ ಇತ್ತಿಚಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿತ್ತು. ಇನ್ನು ವೈದ್ಯೆ ಅವರ ಅತ್ತೆಗೆ ಕಳೆದ ಹತ್ತು ವರ್ಷಗಳಿಂದ  ಕಿರುಕುಳ ನೀಡ್ತಿದ್ದಾರೆ ಎಂದು ಹೇಳಲಾಗ್ತಿದೆ.

ಆಕೆ ಈಗಾಗಲೇ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರೂ ಸಹ ತನ್ನ ಅತ್ತೆಯ ಮನೆಗೆ ಹೋಗಿ ಹಲ್ಲೆ ನಡೆಸಿದ್ದಾರೆ| ಈ ಘಟನೆ ಸಂಬಂಧ ಅನ್ನಪೂರ್ಣೆಶ್ವರಿ ಪೋಲಿಸ್ ಸ್ಟೇಷನ್​ನಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಸ್ಟೇಷನ್​ನಲ್ಲಿಯೇ ಜಾಮೀನು ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.

ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್ ಅವರ ನಿರ್ದೇಶನದ ಮೇರೆಗೆ ವಿಕ್ಟೋರಿಯಾ ಆಸ್ಪತ್ರೆಯ ಡಾ.ಪ್ರಿಯದರ್ಶಿನಿ ಅವರು ಘಟನೆಯ ಬಗ್ಗೆ ಲಿಖಿತ ವಿವರಣೆಯನ್ನು ಸಲ್ಲಿಸುವಂತೆ ಕೇಳಿದ್ದು, ತಪ್ಪಿದಲ್ಲಿ ಮುಂದಿನ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.

ಇನ್ನು ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಮೊಹ್ಸಿನ್, ಇಂತಹ ವರ್ತನೆ ಇಲಾಖೆಗೆ ಮುಜುಗರ ತಂದಿದೆ. ಕೂಡಲೇ ಡಾ.ಪ್ರಿಯದರ್ಶಿನಿ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡುವಂತೆ ವೈದ್ಯಕೀಯ ಶಿಕ್ಷಣ ನಿರ್ದೇಶಕಿ (ಡಿಎಂಇ) ಡಾ.ಸುಜಾತಾ ರಾಥೋಡ್ ಅವರಿಗೆ ಸೂಚಿಸಿದ್ದಾರೆ

Comments (0)

Your email address will not be published. Required fields are marked *

Back to top button