Monday, June 23, 2025
26.6 C
Bengaluru
Google search engine
LIVE
ಮನೆ#Exclusive Newsಗೃಹಲಕ್ಷ್ಮಿ ಯೋಜನೆಯ ಹಣದಲ್ಲಿ ಬೋರ್‌ವೆಲ್ ಕೊರೆಸಿ ಬದುಕು ಕಟ್ಟಿಕೊಂಡ ಅತ್ತೆ - ಸೊಸೆ....!

ಗೃಹಲಕ್ಷ್ಮಿ ಯೋಜನೆಯ ಹಣದಲ್ಲಿ ಬೋರ್‌ವೆಲ್ ಕೊರೆಸಿ ಬದುಕು ಕಟ್ಟಿಕೊಂಡ ಅತ್ತೆ – ಸೊಸೆ….!

ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಮೂಲಕ ಪಡೆದ ಹಣದಲ್ಲಿ ಬೋರ್‌ವೆಲ್ ಕೊರೆಸಿ ಬದುಕು ಕಟ್ಟಿಕೊಂಡ ಅತ್ತೆ – ಸೊಸೆಯ ಮಾತುಗಳು ಕೇಳಿ ಖುಷಿಯಾಯಿತು ಎಂದು ಮುಖ್ಯಮಂತ್ರಿ ಸಿದ್ದಾರಮಯ್ಯ ಅವರು ತಮ್ಮ ಎಕ್ಷ ಖಾತೆಯಲ್ಲಿ ಹಂಚಿಕೊಡಿದ್ದಾರೆ.

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಮಾಲದಾರ ಓಣಿಯ ಅತ್ತೆ ಮಾಬುಬೀ ಹಾಗೂ ಸೊಸೆ ರೋಷನ್ ಬೇಗಂ ಪ್ರತಿ ತಿಂಗಳು ತಮಗೆ ಬಂದ ಗೃಹಲಕ್ಷ್ಮಿ ಹಣ ಕೂಡಿಟ್ಟು ಕೃಷಿ ಭೂಮಿಗೆ ಬೋರ್‌ವೆಲ್ ಕೊರೆಸಿ, ಸಮೃದ್ಧ ನೀರು ಪಡೆದಿದ್ದಾರೆ.

ನಾಡಿನ ಬಡಕುಟುಂಬಗಳಿಗೆ ಆರ್ಥಿಕ ಶಕ್ತಿ ತುಂಬಿ, ಅವರನ್ನು ಸ್ವಾವಲಂಬಿಗಳನ್ನಾಗಿಸುವ ಈ ಯೋಜನೆಯ ಉದ್ದೇಶ ಯಶಸ್ವಿಯಾಗಿ ಈಡೇರುತ್ತಿರುವುದು ಯೋಜನೆಯನ್ನು ಜಾರಿಗೆ ಕೊಟ್ಟ ನನ್ನಲ್ಲಿ ಸಂತೃಪ್ತಭಾವ ಮೂಡಿಸಿದೆ.ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಅತ್ತೆ – ಸೊಸೆಯ ನಡುವೆ ಜಗಳ ಆರಂಭವಾಗುತ್ತದೆ, ಸಂಸಾರಗಳು ಒಡೆಯುತ್ತವೆ ಎಂದು ಟೀಕಿಸಿದ ಜನರಿಗೆ ಬಾರಿಸಿದ ತಪರಾಕಿ ಇದು. ಬೆಳಕಿಗೆ ಬಾರದ ಇಂತಹ ಇನ್ನೂ ಸಾವಿರಾರು ಯಶೋಗಾಥೆಗಳಿವೆ, ಗೃಹಲಕ್ಷ್ಮಿ ನಾಡಿನ ತಾಯಂದಿರ ಬಾಳಿಗೆ ಅಕ್ಷರಶಃ ಭಾಗ್ಯಲಕ್ಷ್ಮಿಯಾಗಿದೆ ಎನ್ನುವುದರಲ್ಲಿ ಯಾವ ಸಂಶಯವೂ ಇಲ್ಲ ಎಂದಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments