ನವದೆಹಲಿ: ಸಂಸದ ಡಿ.ಕೆ.ಸುರೇಶ್ ಪ್ರತ್ಯೇಕ ರಾಷ್ಟ್ರದ ಕೂಗೆಬ್ಬಿಸಿದ್ದಾರೆ. ಅನುದಾನ ತಾರತಮ್ಯ ಸರಿಹೋಗದಿದ್ದರೆ ಪ್ರತ್ಯೇಕ ರಾಷ್ಟ್ರ ಕೊಡಿ ಎಂದಿದ್ದಾರೆ. ಅನುದಾನ ತಾರತಮ್ಯ ಹೀಗೆ ಮುಂದುವರೆದ್ರೆ, ದಕ್ಷಿಣ ಭಾರತದವರು ಪ್ರತ್ಯೇಕ ರಾಷ್ಟ್ರದ ಧ್ವನಿ ಎತ್ತಬೇಕಾದದ್ದು ಅನಿವಾರ್ಯವಾಗಿದೆ. ನಮ್ಮ ರಾಜ್ಯದ ಪಾಲು ನಮಗೆ ಸಿಗುತ್ತಿಲ್ಲ. ನಮ್ಮ ಹಣವನ್ನು ಉತ್ತರ ಭಾರತಕ್ಕೆ ಕೊಡುತ್ತಿದ್ದಾರೆ. ಎಲ್ಲಾ ವಿಚಾರದಲ್ಲೂ ರಾಜ್ಯಕ್ಕೆ ಕೇಂದ್ರದಿಂದ ಅನ್ಯಾಯವಾಗುತ್ತಿದೆ. ಹಿಂದಿ ಭಾಗದವರು ನಮ್ಮ ಮೇಲೆ ಒತ್ತಡ ಹೇರುತ್ತಿದ್ದಾರೆ . ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಯಾವಾಗಲೂ ಅನ್ಯಾಯ ಆಗ್ತಿದೆ ಎಂದು ಸಂಸದ ಡಿಕೆ ಸುರೇಶ್ ಹೇಳಿದ್ದಾರೆ.
ಇನ್ನು ಕೇಂದ್ರದ ಬಜೆಟ್ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ. ಇಂದು ನಮ್ಮ ಗ್ಯಾರಂಟಿಗಳನ್ನು ವಿರೋಧ ಮಾಡಿದಂತವರು ಗ್ಯಾರಂಟಿ ಹೆಸರಿನಲ್ಲಿ ಚುನಾವಣೆಗೆ ಹೊರಟಿದ್ದಾರೆ. ದಕ್ಷಿಣ ಭಾರತದ ಹಣವನ್ನ ಉತ್ತರ ಭಾರತಕ್ಕೆ ಬಿಡುತ್ತಿದ್ದಾರೆ. ಇದರಿಂದ ನಮಗೆ ಆರ್ಥಿಕ ತೊಂದರೆಯಾಗುತ್ತಿದೆ. ಹೀಗೆ ಮುಂದುವರಿದರೆ ದಕ್ಷಿಣ ಭಾರತದ ಕೂಗು ಎತ್ತಬೇಕಾದ ಅನಿವಾರ್ಯತೆ ಬರಲಿದೆ ಎಂದು ಸಂಸದರು ಗರಂ ಹೇಳಿಕೆ ಕೊಟ್ಟಿದ್ದಾರೆ.