ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್ ತನಿಖೆಯ ವಿಚಾರವಾಗಿ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದರು. ವಾದ ಪ್ರತಿವಾದ ಆಲಿಸಿದ ಹೈಕೋರ್ಟ್ ಅರ್ಜಿ ವಿಚಾರಣೆಯನ್ನ ಜನವರಿ 27ಕ್ಕೆ ಮುಂದೂಡಿದೆ.
ಧಾರವಾಡ ಹೈಕೋರ್ಟ್ನಲ್ಲಿ ಮುಡಾ ಕೇಸ್ ತನಿಖೆ ಸಿಬಿಐಗೆ ನೀಡುವಂತೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ.
ಸ್ನೇಹಮಯಿ ಕೃಷ್ಣ ಅವರು ಮುಡಾ ಹಗರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ಹೈಕೋರ್ಟ್ ಏಕಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದು, ಇಂದು ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು,ವಿಚಾರಣೆ ನಡೆಸಿದರು.