ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ (ಧಾರವಾಡ) : ಮುಡಾ ಪ್ರಕರಣದಲ್ಲಿ ಮೊದಲ ಆರೋಪಿ ಸಿದ್ದರಾಮಯ್ಯ ನವರು ಆಗಿರುವ ಕಾರಣ ಪ್ರಕರಣವನ್ನು ಸಿಬಿಐ ತನಿಖೆಗೆ ಕೋಡಬೇಕು.ಸಿಎಂ ಸಿದ್ದರಾಮಯ್ಯ ಸೇರಿ ಪ್ರಭಾವಿ ರಾಜಕಾರಣಿಗಳು, ಅಧಿಕಾರಿಗಳಿಗೆ ಶಿಕ್ಷೆ ಖಚಿತ. ಮುಡಾದಲ್ಲಿ ಸಾವಿರಾರು ಕೋಟಿ ರೂಪಾಯಿ ಭ್ರಷ್ಟಾಚಾರ ಆಗಿದೆ. ನಾನು ಕೇವಲ ಸಿದ್ದರಾಮಯ್ಯ ವಿರುದ್ಧ ಹೋರಾಟ ಮಾಡುತ್ತಿಲ್ಲ. ಸಿದ್ದರಾಮಯ್ಯ ಉದಾಹರಣೆ ಇಟ್ಕೊಂಡು ಎಲ್ಲವೂ ತನಿಖೆ ಆಗಬೇಕು. ತನಿಖೆ ಆದರೆ ಸಿದ್ದರಾಮಯ್ಯ, ಪ್ರಭಾವಿ ರಾಜಕಾರಣಿಗಳು ಜೈಲಿಗೆ ಹೋಗುವುದು ಖಚಿತ. ಇವತ್ತು ಹೈಕೋರ್ಟ್ನಲ್ಲಿ ವಿಚಾರಣೆ ಇದೆ. ಶೇಕಡಾ 99 ರಷ್ಟು ಆದೇಶ ಹೊರಬರಬಹುದು” ಎಂಬ ವಿಶ್ವಾಸ ವ್ಯಕ್ತಪಡಿಸಿದರು.