Wednesday, August 20, 2025
18.3 C
Bengaluru
Google search engine
LIVE
ಮನೆ#Exclusive NewsTop Newsತನಿಖೆ ಮುಗಿದು ವರದಿ ಬರುವ ವರೆಗೆ ಆ ನಿವೇಶನಗಳು ನಮ್ಮದಲ್ಲವೆಂದ ಯತೀಂದ್ರ

ತನಿಖೆ ಮುಗಿದು ವರದಿ ಬರುವ ವರೆಗೆ ಆ ನಿವೇಶನಗಳು ನಮ್ಮದಲ್ಲವೆಂದ ಯತೀಂದ್ರ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷಗಳಾದ ಬಿಜೆಪಿ ಜೆಡಿಎಸ್ ಹೋರಾಟ ತೀವ್ರಗೊಂಡಿದೆ. ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪಾದಯಾತ್ರೆಯೂ ನಡೆಯುತ್ತಿದೆ. ಈ ಮಧ್ಯೆ, ಮುಡಾ ನಿವೇಶನ ಹಂಚಿಕೆ ಸಂಬಂಧ ತನಿಖೆ ನಡೆದು ವರದಿ ಬರುವವರೆಗೂ ಆ ನಿವೇಶನಗಳು ನಮ್ಮದಲ್ಲ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಮುಡಾ ನಿವೇಶನ ಹಂಚಿಕೆ ಸಂಬಂಧ ನ್ಯಾಯಾಂಗ ತನಿಖೆ ಆಗುತ್ತಿದೆ. ಈಗಾಗಲೇ ಮುಡಾ ಸೈಟ್​​ ವಾಪಸ್ ಕೊಡುವ ಬಗ್ಗೆ ಹೇಳಾಗಿದೆ. 2005 ರಿಂದ ಯಾರಿಗೆಲ್ಲಾ ನಿವೇಶನ ಕೊಟ್ಟಿದ್ದಾರೆ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಅದರ ಅರ್ಥ ನಮಗೆ ಕೊಟ್ಟಿರುವ ನಿವೇಶನವೂ ರದ್ದಾಗಿದೆ ಎಂಬುದು. ಈಗ ಆ ನಿವೇಶನಗಳು ನಮ್ಮ ಸುಪರ್ದಿಗೆ ಬರುವುದಿಲ್ಲ ಎಂದು ಹೇಳಿದ್ದಾರೆ.

ನ್ಯಾಯಾಂಗ ತನಿಖೆ ನಡೆದು ವರದಿ ಬರುವವರೆಗೂ ಸೈಟ್ ನಮ್ಮದಲ್ಲ. ತನಿಖೆ ಮಾಡಿ ನಮ್ಮದು ಎಂದರೆ ನಿವೇಶನ ನಮಗೆ ಕೊಡುತ್ತಾರೆ. ಇಲ್ಲದಿದ್ದರೆ ಕುಟುಂಬದವರು ನ್ಯಾಯಾಲಯದ ಮೊರೆ ಹೋಗುತ್ತೇವೆ. ನಮ್ಮ ತಂದೆ ಭ್ರಷ್ಟಾಚಾರ ಮಾಡಿದ್ದಾರೆಂದು ಬಿಂಬಿಸುವುದು ಸರಿಯಲ್ಲ ಎಂದು ಯತೀಂದ್ರ ಹೇಳಿದ್ದಾರೆ.

ಈ ಮಧ್ಯೆ, ಬಿಜೆಪಿ ಜೆಡಿಎಸ್ ಪಾದಯಾತ್ರೆ 7ನೇ ದಿನಕ್ಕೆ ಕಾಲಿಟ್ಟಿದೆ. ಒಂದೆಡೆ ಪಾದಯಾತ್ರೆ ಮೈಸೂರಿನ ಬಳಿ ಸಮೀಪಿಸುತ್ತಿದ್ದಂತೆಯೇ ಅತ್ತ ಕಾಂಗ್ರೆಸ್ ಜನಾಂದೋಲನ ಸಮಾವೇಶ ಆಯೋಜಿಸಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಗಣ್ಯರು ಸಮಾವೇಶದಲ್ಲಿ ಭಾಗವಹಿಸುತ್ತಿದ್ದು, ಪ್ರತಿಪಕ್ಷಗಳ ಆರೋಪಗಳಿಗೆ ಕೌಂಟರ್ ಕೊಡಲಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments