ಮುಕೇಶ್- ನೀತಾ ಅಂಬಾನಿ ದಂಪತಿಯ ಮಗ ಅನಂತ್ ಅಂಬಾನಿ ಅವರ ಮದುವೆ ಇದೇ ಜುಲೈ 12ನೇ ತಾರೀಕಿಗೆ ರಾಧಿಕಾ ಮರ್ಚೆಂಟ್ ಜೊತೆಗೆ ನಡೆಯಲಿದೆ.
ತಮ್ಮ ಕಿರಿಯ ಪುತ್ರ ಅನಂತ್ ಅಂಬಾನಿಯವರ ಮದುವೆಗೂ ಮುಂಚಿತವಾಗಿ ನೀತಾ ಅಂಬಾನಿ ಮತ್ತು ಮುಖೇಶ್ ಅಂಬಾನಿ ಇಂದು (ಜುಲೈ 2) ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ 50ಕ್ಕೂ ಹೆಚ್ಚು ಬಡ ಕುಟುಂಬದ ಜೋಡಿಗಳಿಗೆ ಸಾಮೂಹಿಕ ವಿವಾಹವನ್ನು ಆಯೋಜಿಸಿದ್ದರು.
ಅದಕ್ಕೂ ಮುನ್ನ ಅಂಬಾನಿ ಕುಟುಂಬದಿಂದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮುಂಬೈನಿಂದ 100 ಕಿ.ಮೀ ದೂರದಲ್ಲಿರುವ ಪಾಲ್ಘರ್ ಪ್ರದೇಶದಲ್ಲಿನ 50ಕ್ಕೂ ಹೆಚ್ಚು ಜೋಡಿಗಳಿಗೆ, ಅದರಲ್ಲೂ ಆರ್ಥಿಕವಾಗಿ ಹಿಂದುಳಿದಂಥ ವಧು- ವರರಿಗೆ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ನಡೆಸಲಾಯಿತು.
ಥಾಣೆಯ ರಿಲಯನ್ಸ್ ಕಾರ್ಪೊರೇಟ್ ಪಾರ್ಕ್‌ನಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮವು ದಂಪತಿಗಳ ಕುಟುಂಬಗಳನ್ನು ಪ್ರತಿನಿಧಿಸುವ ಸುಮಾರು 800 ಜನರ ಸಮ್ಮುಖದಲ್ಲಿ ನಡೆಯಿತು.
ನೀತಾ ಅಂಬಾನಿ ಮತ್ತು ಮುಖೇಶ್ ಅಂಬಾನಿ, ಆಕಾಶ್ ಅಂಬಾನಿ ಮತ್ತು ಶ್ಲೋಕಾ ಮೆಹ್ತಾ, ಇಶಾ ಅಂಬಾನಿ ಮತ್ತು ಆನಂದ್ ಪಿರಮಾಳ್ ಈ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಅನಂತ್- ರಾಧಿಕಾ ಮದುವೆಗೆ ಇದು ಆರಂಭಿಕ ಕಾರ್ಯಕ್ರಮವಾಗಿದ್ದು, ಮುಂದಿನ ಮದುವೆ ಋತುವಿನಲ್ಲಿ ದೇಶದಾದ್ಯಂತ ಈ ರೀತಿಯಾಗಿ ನೂರಕ್ಕೂ ಹೆಚ್ಚು ವಿವಾಹಗಳಿಗೆ ಅಂಬಾನಿ ಕುಟುಂಬದ ಬೆಂಬಲ ದೊರೆಯಲಿದೆ. ಈ ಬಗ್ಗೆ ಅಂಬಾನಿ ಕುಟುಂಬ ಸಂಕಲ್ಪವನ್ನೇ ಮಾಡಿದ್ದಾರೆ.
ಅಂದ ಹಾಗೆ ಮುಂಬೈನಲ್ಲಿ ನಡೆದ ಈ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ನೀತಾ ಅಂಬಾನಿ ಮತ್ತು ಮುಕೇಶ್ ಅಂಬಾನಿ ಅವರು ತಮ್ಮ ಕುಟುಂಬದ ಸದಸ್ಯರೊಂದಿಗೆ ಪಾಲ್ಗೊಂಡಿದ್ದರು ಮತ್ತು ನವ ವಿವಾಹಿತ ಜೋಡಿಗಳಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸಿದರು.
ಈ ಸಾಮೂಹಿಕ ವಿವಾಹ ಸಂದರ್ಭದಲ್ಲಿ ಪ್ರತಿ ಜೋಡಿಗೂ ಮಂಗಳಸೂತ್ರ, ಮದುವೆಯ ಉಂಗುರ, ಮೂಗುತಿ ಸೇರಿದಂತೆ ಚಿನ್ನಾಭರಣಗಳನ್ನು ನೀಡಲಾಯಿತು. ಜೊತೆಗೆ ಕಾಲುಂಗುರ, ಕಾಲ್ಗೆಜ್ಜೆಯಂಥ ಬೆಳ್ಳಿ ಆಭರಣಗಳನ್ನು ಸಹ ನೀಡಲಾಯಿತು.
Phone Number : +91-9164072277
Email id : salesatfreedomtv@gmail.com