
ಕೊಪ್ಪಳ: ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಪೊಲೀಸ್ ಠಾಣೆಯ ಪಿಎಸ್ಐ ಸುನೀಲ್ ಅವರನ್ನು ಆಡಳಿತಾತ್ಮಕ ವೈಫಲ್ಯದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಅರಸಿದ್ಧಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಈ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸುನೀಲ್ ಅವರ ಅವಧಿಯಲ್ಲಿ, ಠಾಣೆ ವ್ಯಾಪ್ತಿಯಲ್ಲಿ ಹಲವಾರು ಕಾನೂನುಬಾಹಿರ ಚಟುವಟಿಕೆಗಳು ನಡೆದಿದ್ದವು ಎನ್ನಲಾಗಿದೆ. ಮುಖ್ಯವಾಗಿ ವಿದೇಶಿಗರ ಪಾರ್ಟಿ, ಅಕ್ರಮ ಕಲ್ಲು ಗಣಿಗಾರಿಕೆ ಹಾಗೂ ಅನ್ನಭಾಗ್ಯ ಯೋಜನೆಯ ಅಕ್ಕಿ ಅಕ್ರಮ ಮಾರಾಟದಂತಹ ಗಂಭೀರ ಪ್ರಕರಣಗಳು ಇತ್ತೀಚೆಗೆ ಬೆಳಕಿಗೆ ಬಂದಿದ್ದವು. ಈ ಹಿನ್ನೆಲೆಯಲ್ಲಿ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ ಮತ್ತು ಆಡಳಿತಾತ್ಮಕ ವಿಚಾರಗಳನ್ನು ಸಮರ್ಪಕವಾಗಿ ನಿಭಾಯಿಸದ ಕಾರಣಕ್ಕಾಗಿ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ




