Top Newsಕ್ರೈಂ ಸ್ಟೋರಿರಾಜ್ಯಸುದ್ದಿ

ಬೆಂಗಳೂರು : ಬಾಂಗ್ಲಾದೇಶ ಮಹಿಳೆ ಮೇಲೆ ಅತ್ಯಾಚಾರಗೈದು ಹತ್ಯೆ ಮಾಡಿದ ದುಷ್ಕರ್ಮಿಗಳು

ಬೆಂಗಳೂರು: ಮನೆಗೆಲಸ ಮಾಡುತ್ತಿದ್ದ ಮಹಿಳೆ ಶವವಾಗಿ ಪತ್ತೆ ಆಗಿರುವಂತಹ ಘಟನೆ ರಾಮಮೂರ್ತಿನಗರ ಠಾಣಾ ವ್ಯಾಪ್ತಿಯ ಕಲ್ಕೆರೆ ಕೆರೆ ಬಳಿ ನಿರ್ಜನ ಪ್ರದೇಶದಲ್ಲಿ ಮೃತದೇಹ ಪತ್ತೆ ಆಗಿದೆ. ನಜ್ಮಾ ಮೃತ ಬಾಂಗ್ಲಾದೇಶ ಮೂಲದ ಮಹಿಳೆ. ನಜ್ಮಾ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ.

ಬಾಂಗ್ಲಾದೇಶ ಮೂಲದ ಮಹಿಳೆ ಹಾಗೂ ಆಕೆಯ ಪತಿ ಕಳೆದ 6 ವರ್ಷಗಳಿಂದಲೂ ಮೂವರು ಮಕ್ಕಳೊಂದಿಗೆ ಬೆಂಗಳೂರಿನಲ್ಲಿ ನೆಲೆಸಿದ್ದರು. ನಗರದ ಖಾಸಗಿ ಅಪಾರ್ಟ್‌ಮೆಂಟ್‌ವೊಂದರಲ್ಲಿ ಮಹಿಳೆ ಮನೆಗೆಲಸ ಮಾಡಿಕೊಂಡಿದ್ದಳು. ಗುರುವಾರ ಕೆಲಸ ಮುಗಿಸಿ ಅಪಾರ್ಟ್‌ಮೆಂಟ್‌ನಿಂದ ತೆರಳಿದ್ದ ಮಹಿಳೆ, ಮನೆಗೆ ಮರಳಿರಲಿಲ್ಲ. ಬೆಳಗ್ಗೆ ಕಲ್ಕೆರೆ ಸಮೀಪದ ನಿರ್ಜನ ಪ್ರದೇಶದಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ರಾಮಮೂರ್ತಿನಗರ ಠಾಣೆ ಪೊಲೀಸರು, ವಿಧಿ ವಿಜ್ಞಾನ ಪ್ರಯೋಗಾಲಯ ಹಾಗೂ ಸೋಕೋ ಟೀಂ ಸಿಬ್ಬಂದಿ ಭೇಟಿ ನೀಡಿ, ತಪಾಸಣೆ ನಡೆಸಿದ್ದಾರೆ‌. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.

ಈ ಬಗ್ಗೆ ಬೆಂಗಳೂರು ಪೂರ್ವ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಪ್ರತಿಕ್ರಿಯಿಸಿ, ಮಹಿಳೆಯ ಪತಿ ಪಾಸ್‌ಪೋರ್ಟ್ ಮೂಲಕವೇ ಭಾರತಕ್ಕೆ ಬಂದಿದ್ದಾರೆ. ಆದರೆ ಹತ್ಯೆಯಾದ ಮಹಿಳೆಯು ಪಾಸ್‌ಪೋರ್ಟ್ ಇಲ್ಲದೆ, ಅಕ್ರಮವಾಗಿ ಬಂದಿರುವುದು ತಿಳಿದು ಬಂದಿದೆ. ಪತಿ ನೀಡಿರುವ ದೂರಿನ ಅನ್ವಯ ಲೈಂಗಿಕ‌ ದೌರ್ಜನ್ಯ ಹಾಗೂ ಹತ್ಯೆಯ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ.

Comments (0)

Your email address will not be published. Required fields are marked *

Back to top button