Top Newsರಾಜಕೀಯರಾಜ್ಯಸುದ್ದಿ

ಸಚಿವೆ ಲಕ್ಷ್ಮೀ ಹೆಬಾಳ್ಕರ್‌ಗೆ 1 ಕೆಜಿ ಬಂಗಾರ ಆಫರ್ ಕೊಟ್ಟ ಮುರುಗೇಶ ನಿರಾಣಿ

ಬಾಗಲಕೋಟೆ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಿದರೆ ಸಮಾಜದ ಋಣ ತೀರಿಸಿದಂತೆ ಆಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬಾಳ್ಕರ್‌ಗೆ ಮಾಜಿ ಸಚಿವ ಮುರುಗೇಶ ನಿರಾಣಿ ತಿರುಗೇಟು ನೀಡಿದ್ದಾರೆ.

ಬೆಳಗಾವಿ ಸುವರ್ಣಸೌಧ ಮುಂದೆ ಪಂಚಮಸಾಲಿಗರ ಮೇಲೆ ಪೊಲೀಸರು ಲಾಠಿ ಜಾರ್ಜ್‌ ಮಾಡಿದ್ದನ್ನು ಖಂಡಿಸಿ ಬಾಗಲಕೋಟೆ ಶಿರೂರ ಅಗಸಿ ಬಳಿ ಪಂಚಮಸಾಲಿ ಸಮಾಜದಿಂದ ನಡೆದ ರಸ್ತೆ ತಡೆ, ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದಲ್ಲಿ ನಾನು ಕೈಗಾರಿಕಾ ಸಚಿವನಾಗಿದ್ದ ಸಮಯದಲ್ಲಿ 2ಎ ಮೀಸಲಾತಿ ಸಮಾಜಕ್ಕೆ ಒದಗಿಸಿಕೊಟ್ಟರೆ ಸಹೋದರಿ, ಹಾಗೂ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರು ಬೆಳಗಾವಿಯಿಂದ ಕುಂದಾ ತಂದು, ಬಂಗಾರದ ಕಿರೀಟ ಹಾಕುವುದಾಗಿ ಹೇಳಿಕೆ ನೀಡಿದ್ದೀರಿ.

1 ಕೆಜಿ ಚಿನ್ನ ಕೊಟ್ಟು ಸನ್ಮಾನ ಮಾಡುತ್ತೇನೆ

ಈಗ ಅವರದ್ದೇ ಸರ್ಕಾರ ಬಂದು ಒಂದೂವರೆ ವರ್ಷ ಆಯ್ತು, ಈಗ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪಂಚಮಸಾಲಿಗಳಿಗೆ ಮೀಸಲಾತಿ ಕೊಡಲಿ ಅಂತ ಮುರುಗೇಶ್ ನಿರಾಣಿ ಸವಾಲು ಹಾಕಿದ್ದಾರೆ. ಅಲ್ಲದೇ ಪಂಚಮಸಾಲಿ ಮೀಸಲಾತಿ ಕೊಟ್ಟರೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಒಂದು ಕೆಜಿ ಬಂಗಾರ ಕೊಟ್ಟು ಸನ್ಮಾನ ಮಾಡ್ತೇನೆ ಅಂತಲೂ ಮುರುಗೇಶ್ ನಿರಾಣಿ ಚಿನ್ನದಂತಾ ಆಫರ್ ಕೊಟ್ಟಿದ್ದಾರೆ

 

Comments (0)

Your email address will not be published. Required fields are marked *

Back to top button