Thursday, November 20, 2025
19.1 C
Bengaluru
Google search engine
LIVE
ಮನೆ#Exclusive Newsದೇಶದ ಪ್ರಧಾನಿಯಾಗುವುದು ನನ್ನ ಗುರಿಯಲ್ಲ: ನಿತಿನ್ ಗಡ್ಕರಿ

ದೇಶದ ಪ್ರಧಾನಿಯಾಗುವುದು ನನ್ನ ಗುರಿಯಲ್ಲ: ನಿತಿನ್ ಗಡ್ಕರಿ

 

ನ್ಯಾಯಾಂಗ, ಕಾರ್ಯಾಂಗ, ಶಾಸಕಾಂಗ ಮತ್ತು ಮಾಧ್ಯಮ ಈ ನಾಲ್ಕು ಆಧಾರ ಸ್ತಂಭಗಳು ನೈತಿಕತೆಯನ್ನು ಅನುಸರಿಸಿದಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ. ದೇಶದ ಪ್ರಧಾನಿಯಾಗುವುದು ನನ್ನ ಜೀವನದ ಗುರಿಯಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

‘‘ದೇಶದ ಪ್ರಧಾನಿಯಾಗುವುದು ನನ್ನ ಗುರಿಯಲ್ಲ’’ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ನಾಗ್ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹಳೆಯ ಘಟನೆಯನ್ನು ನೆನಪಿಸಿಕೊಂಡ ಗಡ್ಕರಿ, ‘‘ಹಿಂದೊಮ್ಮೆ ವ್ಯಕ್ತಿಯೊಬ್ಬರು ನೀವು ಪ್ರಧಾನಿ ಹುದ್ದೆಗೆ ಸ್ಪರ್ಧಿಸಿ ನಾವು ಬೆಂಬಲಿಸುತ್ತೇವೆ ಎಂದು ಹೇಳಿದ್ದರು, ಆದರೆ ಆ ಪ್ರಸ್ತಾಪವನ್ನು ನಾನು ನಿರಾಕರಿಸಿದ್ದೆ, ಪ್ರಧಾನಿಯಾಗುವ ಗುರಿ ನನ್ನದಲ್ಲ’’ ಎಂದು ಸ್ಪಷ್ಟಪಡಿಸಿದರು.

ಪ್ರಧಾನಿಯಾಗುವುದು ನನ್ನ ಗುರಿಯಲ್ಲ, ನಾನು ನನ್ನ ಮೌಲ್ಯಗಳಿಗೆ ಹಾಗೂ ನನ್ನ ಸಂಸ್ಥೆಗೆ ನಿಷ್ಠನಾಗಿದ್ದೇನೆ, ಯಾವುದೇ ಸ್ಥಾನಕ್ಕೂ ನಾನು ರಾಜಿ ಮಾಡಿಕೊಳ್ಳುವುದಿಲ್ಲ, ಈ ಮೌಲ್ಯವು ಭಾರತದ ಪ್ರಜಾಪ್ರಭುತ್ವದ ಆಧಾರವಾಗಿದೆ ಎಂದರು.

2024 ಮತ್ತು 2019ರ ಲೋಕಸಭೆ ಚುನಾವಣೆ ವೇಳೆ ನಿತಿನ್ ಗಡ್ಕರಿ ಅವರ ಹೆಸರು ಪ್ರಧಾನಿ ಹುದ್ದೆಗೆ ಸಂಭಾವ್ಯ ಅಭ್ಯರ್ಥಿ ಎಂದು ಚರ್ಚೆಗೆ ಬಂದಿತ್ತು. ಈ ವರ್ಷದ ಸಾರ್ವತ್ರಿಕ ಚುನಾವಣೆಗೆ ಮುನ್ನ ಇಂಡಿಯಾ ಟುಡೆಯ ಮೂಡ್ ಆಫ್ ದಿ ನೇಷನ್ ಸಮೀಕ್ಷೆಯು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಂತರ ನರೇಂದ್ರ ಮೋದಿಯ ನಂತರ ಪ್ರಧಾನಿಯಾಗಲು ಮೂರನೇ ಅತ್ಯಂತ ಸೂಕ್ತ ನಾಯಕ ಎಂದು ಶ್ರೇಯಾಂಕ ನೀಡಿತ್ತು.

 

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments