Thursday, November 20, 2025
19.9 C
Bengaluru
Google search engine
LIVE
ಮನೆರಾಜಕೀಯಕುಮಾರಸ್ವಾಮಿಯವರನ್ನ ಸಿಎಂ ಕುರ್ಚಿಯಲ್ಲಿ ಕೂರಿಸೋದು ನನ್ನ ಗುರಿ-ನಿಖಿಲ್​ ಕುಮಾರಸ್ವಾಮಿ

ಕುಮಾರಸ್ವಾಮಿಯವರನ್ನ ಸಿಎಂ ಕುರ್ಚಿಯಲ್ಲಿ ಕೂರಿಸೋದು ನನ್ನ ಗುರಿ-ನಿಖಿಲ್​ ಕುಮಾರಸ್ವಾಮಿ

ರಾಮನಗರ: ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆ ಚನ್ನಪಟ್ಟಣದಲ್ಲಿ ಇಂದು ಜೆಡಿಎಸ್​ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ ನಡೆಸಿದ್ದಾರೆ.. ಸಭೆಯಲ್ಲಿ ಮಾತನಾಡಿದ ನಿಖಿಲ್​​ ಕುಮಾರಸ್ವಾಮಿ ಹೆಚ್​.ಡಿ ಕುಮಾರಸ್ವಾಮಿ ಅವರನ್ನ ಸಿಎಂ ಕುರ್ಚಿಯಲ್ಲಿ ಕೂರಿಸೋದು ನನ್ನ ಗುರಿ ಎಂದು ಹೇಳಿದ್ದಾರೆ..

ಇದೇ ವೇಳೆ ಜೆಡಿಎಸ್ ಕಾರ್ಯಕರ್ತರ ವಿರುದ್ಧ ಬೇಸರ ಹೊರಹಾಕಿದರು. ಸೊಸೈಟಿ ಚುನಾವಣೆ ಹಿನ್ನೆಲೆ ಬಣ ರಾಜಕೀಯ ಮಾಡ್ತಿದ್ದ ಕಾರ್ಯಕರ್ತರನ್ನ ತರಾಟೆಗೆ ತೆಗೆದುಕೊಂಡ ನಿಖಿಲ್, ಶಿಸ್ತಿನ ಪಾಠ ಮಾಡಿದರು. ಸ್ಥಳೀಯ ಮುಖಂಡರ ಒತ್ತಡಕ್ಕೆ ಮಣಿದು ನಾನು ಚುನಾವಣೆಗೆ ಬಂದೆ. ನಾನು ಹೇಡಿ ಅಲ್ಲ, ಸಾರ್ವಜನಿಕವಾಗಿ ಕಣ್ಣೀರು ಹಾಕಲ್ಲ, ಆದರೆ ಅವತ್ತು ಕಣ್ಣೀರು ಹಾಕಿದೆ. ಈಗ ಸೊಸೈಟಿ ಚುನಾವಣೆ ಬಗ್ಗೆ ಪ್ರಶ್ನೆ ಮಾಡ್ತಿದ್ದೀರಲ್ಲಾ. ಜಿಲ್ಲೆಯ ಜನ ನನಗೆ ಅಧಿಕಾರ ಕೊಟ್ಟಿದ್ದೀರಾ? ನನಗೆ ಒಂದು ಬಾರಿಯಾದ್ರೂ ಆಶೀರ್ವಾದ ಮಾಡಿದ್ದೀರಾ?. ಕುಮಾರಣ್ಣ 1,200 ಕೋಟಿ ಅನುದಾನ ತಂದು ಅಭಿವೃದ್ಧಿ ಮಾಡಿದ್ರು. ಆದರೆ ಇಲ್ಲಿ ಅಭಿವೃದ್ಧಿ ರಾಜಕಾರಣಕ್ಕೆ ಬೆಲೆ ಇಲ್ಲ ಎಂದರು.

ಜಿಲ್ಲೆಯಲ್ಲಿ ಕಾಂಗ್ರೆಸ್ ನಾಲ್ಕು ಸ್ಥಾನ ಗೆದ್ದಿದೆ, ಇದು ಶಾಶ್ವತ ಅಲ್ಲ. ಜನ ಮನಸ್ಸು ಮಾಡಿದ್ರೆ ಬದಲಾವಣೆ ಆಗೇ ಆಗುತ್ತೆ. ಇಲ್ಲಿ ನಡೆಯುವ ವಿಚಾರ ಇಡೀ ರಾಜ್ಯಕ್ಕೆ ಹೋಗುತ್ತೆ. ಇಲ್ಲಿ ಬೀದಿಬೀದಿಯಲ್ಲಿ ಚರ್ಚೆ ಮಾಡಿದ್ರೆ ಪಕ್ಷದ ಗೌರವ ಏನಾಗುತ್ತೆ? ಏನೇ ಸಮಸ್ಯೆ ಇದ್ರೂ ಪಕ್ಷದ ಚೌಕಟ್ಟಿನ ಒಳಗೆ ಚರ್ಚೆ ಮಾಡಿ. ಅಧಿಕಾರ ಇದ್ದಾಗ ಸಭೆಗೆ ಎಷ್ಟು ಜನ ಸೇರುತ್ತಿದ್ದರು. ಈಗ ಎಷ್ಟು ಜನ ಬಂದಿದ್ದಾರೆ ಎಂದರು.

ಅಲ್ಲದೇ ಚುನಾವಣೆ ಇನ್ನು ಎರಡೇ ವರ್ಷ ಇರೋದು. ಈಗ ಸೊಸೈಟಿ ಚುನಾವಣೆ ಬಗ್ಗೆ ಚರ್ಚೆ ಮಾಡಿಕೊಂಡು ಕೂತುಕೊಳ್ಳೊದು ಬೇಡ. ತಾಲೂಕಿನಲ್ಲಿ ಸ್ವಾರ್ಥ ರಾಜಕಾರಣ ಮಾಡುತ್ತಿದೆ. ಸಹಕಾರ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಿ ಗೆದ್ದಿದೆ. ಮುಂದೆ ಅಧಿಕಾರ ಹೇಗೆ ಮಾಡಬೇಕು ಅಂತ ಕಾಂಗ್ರೆಸ್‌ನವರು ತೋರಿಸಿಕೊಟ್ಟಿದ್ದಾರೆ. ಮುಂದೆ ನಾವೂ ಇದನ್ನೇ ಅನುಸರಿಸುತ್ತೇವೆ. ನಾನು ಕೆಲಸ ಮಾಡುತ್ತಿರೋದು ಈ ಪಕ್ಷಕ್ಕೋಸ್ಕರ. ಮುಂದೆ ಚುನಾವಣೆಗೆ ಎಷ್ಟು ಸೀಟ್ ತರಬೇಕು ಅನ್ನೋದು ಡೆಲ್ಲಿಯಲ್ಲಿ ತೀರ್ಮಾನ ಆಗುತ್ತದೆ. ಕುಮಾರಣ್ಣನ ಸಿಎಂ ಕುರ್ಚಿಯಲ್ಲಿ ಕೂತ ದಿನ ನಾನು ಅಧಿಕಾರ ತೆಗೆದುಕೊಳ್ಳಲ್ಲ. ಕಾರ್ಯಕರ್ತರು, ಮುಖಂಡರಿಗೆ ಅಧಿಕಾರ ಕೊಡುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

 

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments