Tuesday, January 27, 2026
24 C
Bengaluru
Google search engine
LIVE
ಮನೆ#Exclusive NewsTop Newsಮೈಸೂರಿನಲ್ಲಿ ದಸರಾ ಆನೆಗಳ ದರ್ಬಾರ್ - ವಿಡಿಯೋ ವೈರಲ್

ಮೈಸೂರಿನಲ್ಲಿ ದಸರಾ ಆನೆಗಳ ದರ್ಬಾರ್ – ವಿಡಿಯೋ ವೈರಲ್

ಮೈಸೂರು: ವಿಶ್ವವಿಖ್ಯಾತ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ ದಾಳಿ ಮಾಡಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ದಾಳಿಗೆ ತತ್ತರಿಸಿದ ಕಂಜನ್‌ ಆನೆ ದಿಕ್ಕೆ ಕಾಣದಂತೆ ಅರಮನೆ ಆವರಣದಿಂದ ಹೊರ ಓಡಿದ್ದಾನೆ.

ಇದರಿಂದ ಮತ್ತಷ್ಟು ಬೆದರಿದ ಕಂಜನ್ ದೊಡ್ಡಕೆರೆ ಮೈದಾನ ಬಳಿ ಬ್ಯಾರಿಕೇಡ್ ತಳ್ಳಿಕೊಂಡು ಜನರ ಬಳಿ‌ ಹೋಗಿದೆ. ಈ ವೇಳೆ ಧನಂಜಯ ಅನೆ ಮೇಲೆ ಇದ್ದ ಮಾವುತ ಧೈರ್ಯದಿಂದ ಸಮಯಪ್ರಜ್ಞೆಯಿಂದ ಕೋಪಗೊಂಡಿದ್ದ ಧನಂಜಯನನ್ನು ನಿಯಂತ್ರಣ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಯಾವಾಗ ಧನಂಜಯ ಅಟ್ಟಾಡಿಸುವುದನ್ನು ನಿಲ್ಲಿಸಿತೋ ಬದುಕಿದೆಯಾ ಬಡ ಜೀವ ಅಂತ ಕಂಜನ್ ಆನೆ ಸಹಾ ನಿಂತುಕೊಂಡಿದೆ. ತಕ್ಷಣ ಕಂಜನ್ ಆನೆಯ‌ ಬಳಿ ತೆರಳಿದ ಮಾವುತ, ಕಂಜನ್ ಆನೆಯನ್ನು ಅರಮನೆ‌ ಒಳಗೆ ಕರೆ ತಂದಿದ್ದಾನೆ. ಈ ಮೂಲಕ ಅರಣ್ಯ ಇಲಾಖೆ ಅಧಿಕಾರಿಗಳು ಮಾವುತರ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಬೆಟ್ಟದಂತೆ ಬಂದ ಸಮಸ್ಯೆ ಮಂಜಿನಂತೆ ಕರಗಿ ಎಲ್ಲರೂ ನೆಮ್ಮದಿಯ ನಿಟ್ಡುಸಿರು ಬಿಟ್ಟಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments