Top Newsರಾಜಕೀಯರಾಜ್ಯಸುದ್ದಿ

ರಾಜ್ಯ ರಾಜಕೀಯದಲ್ಲಿ ಮತ್ತೊಮ್ಮೆ ಆಣೆ-ಪ್ರಮಾಣ; ಸಾರಾ ಮಹೇಶ್​ಗೆ ಜಿಟಿಡಿ ಸವಾಲ್…!

ಮೈಸೂರು : ಜೆಡಿಎಸ್ ನಾಯಕರಾದ ಜಿಟಿ ದೇವೇಗೌಡ ಮತ್ತು ಸಾ.ರಾ ಮಹೇಶ್ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಎಚ್.ಡಿ.ಕುಮಾರಸ್ವಾಮಿ ಬಳಿ ನನ್ನ ಮಾತೇನೂ ನಡೆಯುವುದಿಲ್ಲ. ನನ್ನಿಂದ ರಾಜಕೀಯವಾಗಿ ತೊಂದರೆ ಆಗಿದೆ ಎಂದು ಭಾವಿಸಿದ್ದರೆ ಆಣೆ ಪ್ರಮಾಣ ಮಾಡಲು ಚಾಮುಂಡಿಬೆಟ್ಟಕ್ಕೆ ಬರಲಿ ಎಂದು ಸಾ.ರಾ ಮಹೇಶ್ ಸವಾಲ್ ಹಾಕಿದ್ದರು. ಇದೀಗ ಇದಕ್ಕೆ ಪ್ರತಿಕ್ರಿಯಿಸಿರುವ ಜಿಟಿ ದೇವೇಗೌಡ, ಎಚ್.ಡಿ.ದೇವೆಗೌಡರು ನನ್ನನ್ನು ಉಪಚುನಾವಣೆ ಪ್ರಚಾರಕ್ಕೆ ಕರೆದಿದ್ದೇನೆ ಎಂದು ಹೇಳಲಿ. ನಾನು ಅಂದೆ ರಾಜಕಾರಣವನ್ನ ಬಿಟ್ಟುಬಿಡುತ್ತೇನೆ ಮಹೇಶ್​​ಗೆ ತಿರುಗೇಟು ನೀಡಿದ್ದಾರೆ.ಸಾ.ರಾ.ಮಹೇಶ್ ಸುಮ್ಮನೆ ಸುಳ್ಳು ಹೇಳುವುದನ್ನು ನಿಲ್ಲಿಸಬೇಕು. ಸುಳ್ಳು ಹೇಳಿಕೊಂಡು ಚಾಮುಂಡಿಬೆಟ್ಟಕ್ಕೆ ಬಾ ಅಲ್ಲಿಗೆ ಬಾ ಅಂದರೆ ಹೋಗಲು ಆಗುತ್ತದ. ಈ ಹಿಂದೆ ವಿಶ್ವನಾಥ್ ಜೊತೆ ಚಾಮುಂಡಿಬೆಟ್ಟಕ್ಕೆ ಹೋಗಿ ಅವರ ಕಥೆ ಏನಾಯಿತು. ಆ ಕಥೆ ನನಗು ಆಗಬೇಕಾ ಎಂದು ಖಾರವಾಗಿ ಮಾತನಾಡಿದರು.

ನಾನು ಹೇಳುತ್ತಿರೋದೆ ಸತ್ಯ. ನಾನು ತಪ್ಪು ಮಾಡಿದ್ದರೆ ತಪ್ಪು ಮಾಡಿದ್ದೇನೆ ಎಂದು ಒಪ್ಪಿಕೊಳ್ಳುತ್ತೇನೆ. ಒಂದು ಬಾರಿ ಯಾವುದೋ ತಪ್ಪು ಮಾಡಿದ್ದೆ. ಅಂದು ಸಂಜೆಯೆ ನನ್ನ ತಾಯಿ ಬಳಿ ಹೋಗಿ ತಪ್ಪು ಒಪ್ಪುಕೊಂಡಿದ್ದೆ. ನಾನು ಯಾವುದಕ್ಕೂ ಹೆದರುವುದಿಲ್ಲ ಸುಳ್ಳು ಹೇಳುವವನು ಅಲ್ಲ. ಸುಮ್ಮನೆ ಸಾ.ರಾ.ಮಹೇಶ್ ಸುಳ್ಳು ಹೇಳುವುದನ್ನು ನಿಲ್ಲಿಸಬೇಕು ವಾಗ್ದಾಳಿ ನಡೆಸಿದರು.

ನನಗೆ ಯಾರೋ ಒಬ್ಬರ ಹೆಸರು ಇಟ್ಟುಕೊಂಡ ರಾಜಕಾರಣ ಮಾಡುವ ಅನಿವಾರ್ಯತೆ ಇಲ್ಲ. ಯಾರು ಇಲ್ಲದಿದ್ದರು ನಾನು ರಾಜಕಾರಣ ಮಾಡಿದ್ದೇನೆ. ನನಗೆ ರಾಜಕೀಯ ಮಾಡುವುದು ಗೊತ್ತು. ನಾನು ಯಾರ ಕತ್ತನ್ನು ಕೊಯ್ದಿಲ್ಲ. ನನ್ನನ್ನು ಯಾರು ಯಾವ ಪಕ್ಷಕ್ಕೂ ಕರೆ ತಂದಿಲ್ಲ. ನಾನು ಸ್ವಂತವಾಗಿ ರಾಜಕಾರಣ ಮಾಡಿದವನು ಎಂದು ವಿರೋಧಿಗಳಿಗೆ ಸಂದೇಶ ರವಾನಿಸಿದರು.

 

Comments (0)

Your email address will not be published. Required fields are marked *

Back to top button