Top Newsಸುದ್ದಿ

ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ಸಾಧ್ಯತೆ

ಮೈಸೂರು: ಮುಡಾಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಗುರುವಾರವೂ ಪ್ರಕರಣ ದಾಖಲಾಗಿಲ್ಲ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧುವಾರ ನೀಡಿದ್ದ ಆದೇಶದ ಪ್ರತಿಯನ್ನು ಪಡೆಯಲು ಖುದ್ದಾಗಿ ಲೋಕಾಯುಕ್ತ ಎಸ್​ಪಿ ಟಿ.ಜೆ.ಉದೇಶ್ ಬೆಂಗಳೂರಿಗೆ ಬೆಂಗಳೂರಿಗೆ ತೆರಳಿದ್ದು, ಮೈಸೂರಿಗೆ ಬಂದ ಬಳಿಕ ಶುಕ್ರವಾರ ಬೆಳಗ್ಗೆ ಸಿಎಂ ವಿರುದ್ಧ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಬುಧವಾರ ಮಧ್ಯಾಹ್ನ ಆದೇಶವಾದ ಬಳಿಕೆ ಆದೇಶ ಪ್ರತಿ ಬರಬಹುದೆಂಬ ನಿರೀಕ್ಷೆಯಲ್ಲಿ ಸಂಜೆಯವರೆಗೂ ಕಚೇರಿಯಲ್ಲೇ ಇದ್ದ ಲೋಕಾಯುಕ್ತ ಎಸ್​ಪಿ ಎಫ್​ಐಆರ್ ದಾಖಲಿಸಲು ಸಿದ್ಧತೆ ನಡೆಸಿದ್ದರು. ಗುರುವಾರ ಬೆಳಗ್ಗೆ ಆದೇಶ ಪ್ರತಿ ಸಂಗ್ರಹಿಸಿಕೊಂಡು ಬರಲು ಖುದ್ದಾಗಿ ಬೆಂಗಳೂರಿಗೆ ತೆರಳಿದ್ದು, ಲೋಕಾಯುಕ್ತ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಅಗತ್ಯ ಮಾರ್ಗದರ್ಶನದೊಂದಿಗೆ ಕಾನೂನು ಸಲಹೆ ಪಡೆದಿದ್ದಾರೆ ಎನ್ನಲಾಗಿದೆ.

Comments (0)

Your email address will not be published. Required fields are marked *

Back to top button