ಜಿಲ್ಲೆ

ನಾಳೆಯಿಂದ ಮೈಸೂರಿನಲ್ಲಿ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ

ಮೈಸೂರು ; ನಾಳೆಯಿಂದ ಮೈಸೂರಿನ ರಂಗಾಯಣ ಸಂಸ್ಥೆಯಿಂದ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ನಡೆಯಲಿದ್ದು, ರಂಗಾಯಣ ಸಂಸ್ಥೆಯ ಆವರಣದಲ್ಲಿ ಸಕಲ ಸಿದ್ದತೆ ನಡೆಯುತ್ತಿದೆ.

ಮಾರ್ಚ್ 6ರಿಂದ 11ರವರೆಗೆ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಆಯೋಜನೆ ಮಾಡಲಾಗಿದ್ದು, ಇವ ನಮ್ಮವ ಇವ ನಮ್ಮವ’ ಎಂಬ ಬಸವಣ್ಣನವರ ವಚನದ ಸಾಲಿನ ಶೀರ್ಷಿಕೆಯೊಂದಿಗೆ ಈ ಬಾರಿಯ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಅನಾವರಣಗೊಳ್ಳಲಿದೆ.

ನಾಡಿನ ಹೆಸರಾಂತ ಸಾಹಿತಿ, ಕವಿ ಜಯಂತ್ ಕಾಯ್ಕಿಣಿಯವರು ಚಾಲನೆ ನೀಡಲಿದ್ದಾರೆ. ಈ ಬಾರಿ ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಮಣಿಪುರ, ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳ 6 ನಾಟಕಗಳು, ಕನ್ನಡ ಭಾಷೆಯ 10 ಹಾಗೂ ತುಳು ಭಾಷೆಯ ಒಂದು ನಾಟಕ ಸೇರಿದಂತೆ ಒಟ್ಟು 17 ನಾಟಕಗಳು ಭೂಮಿಗೀತ, ವನರಂಗ, ಕಲಾಮಂದಿರ, ಕಿರುರಂಗಮಂದಿರದಲ್ಲಿ ಪ್ರದರ್ಶನಗೊಳ್ಳಲಿವೆ. ಇದರ ಜೊತೆಗೆ ಜನಪದ ಸಂಭ್ರಮ, ವಿಚಾರ ಸಂಕಿರಣ, ಕರಕುಶಲ ಮೇಳ, ಪುಸ್ತಕ ಮಾರಾಟ, ಚಲನಚಿತ್ರೋತ್ಸವ ಮೊದಲಾದ ಕಾರ್ಯಕ್ರಮಗಳು ಅನಾವರಣಗೊಳ್ಳಲಿವೆ.

Comments (0)

Your email address will not be published. Required fields are marked *

Back to top button