Top Newsರಾಜಕೀಯಸುದ್ದಿ

ನಾನ್ಯಾಕೆ ರಾಜೀನಾಮೆ ಕೊಡಬೇಕು, ನಾನು ಯಾವ ತಪ್ಪು ಮಾಡಿಲ್ಲ- ಸಿಎಂ ಸಿದ್ದರಾಮಯ್ಯ

ಮೈಸೂರು: ನಾನು ಯಾಕೆ ರಾಜೀನಾಮೆ ಕೊಡಲಿ. ನಾನು ಏನು ತಪ್ಪು ಮಾಡಿದ್ದೇನೆ ಹೇಳಿ. ನಾನು ಯಾವ ತಪ್ಪು ಮಾಡಿಲ್ಲ. ರಾಜೀನಾಮೆ ಪ್ರಶ್ನೆಗಳೇ ಬರುವುದಿಲ್ಲ ಎಂದರು. ನನ್ನ ಕಂಡರೇ ವಿಪಕ್ಷಗಳಿಗೆ ಭಯ ಉಂಟಾಗುತ್ತಿದೆ. ಹೀಗಾಗಿ ಪದೇ ಪದೇ ನನ್ನನ್ನೇ ಟಾರ್ಗೆಟ್ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಪಕ್ಷಗಳ ವಿರುದ್ಧ ಹರಿಹಾಯ್ದಿದ್ದಾರೆ.

ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು,  ಇದು ನನ್ನ ಜೀವನ ರಾಜಕೀಯದ ಸಂಬಂಧದ ಮೊದಲ ಕೇಸ್ ಆಗಿದೆ. ನಾನು ಮತ್ತೆ ಹೇಳುತ್ತಿದ್ದೇನೆ. ಇದು ರಾಜಕೀಯ ಸಂಬಂಧದ ಮೊದಲ ಕೇಸ್. ಪ್ಲೀಸ್ ಅಂಡರ್ ಲೈನ್ ದಿಸ್ ವರ್ಡ್ ಎಂದು ಹೇಳಿದ್ದಾರೆ.

ಕಾನೂನು ಹೋರಾಟವನ್ನ ನಮ್ಮ ವಕೀಲರು ಮಾಡುತ್ತಾರೆ. ಇವತ್ತು ಅಪಾರ ಸಂಖ್ಯೆಯಲ್ಲಿ ಬೆಂಬಲಿಗರು ನನ್ನ ಸ್ವಾಗತಿಸಲು ಬಂದಿದ್ದಾರೆ. ನಾನು ಯಾರನ್ನೂ ಕರೆದಿಲ್ಲ, ಅವರೇ ಪ್ರೀತಿಯಿಂದ ಬಂದಿದ್ದಾರೆ. ನನಗೆ ಯಾವ ಭಯವೂ ಇಲ್ಲ. ನಾನು ಭಯಗೊಂಡ ರೀತಿ ಕಾಣುತ್ತಿದ್ದೀನಾ ನಿಮಗೆ? ಅಂತ ಪ್ರಶ್ನಿಸಿದ್ದಾರೆ.

Comments (0)

Your email address will not be published. Required fields are marked *

Back to top button