ರಾಜಕೀಯ

ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ನಾಗೇಂದ್ರ!

Nagendra announces resignation from ministerial post while in tears!

ಬೆಂಗಳೂರು : ಕೊನೆಗೂ ವಾಲ್ಮೀಕಿ ಹಗರಣದ ಆರೋಪ ಹೊತ್ತಿರುವ ಸಚಿವ ಬಿ. ನಾಗೇಂದ್ರ ರಾಜೀನಾಮೆ ಘೋಷಿಸಿದ್ದಾರೆ. ಡಿಕೆ ಸರ್ಕಾರ ಅಸ್ತಿತ್ವಕ್ಕೆ ಬಂದು 3 ತಿಂಗಳ ಮೊದಲೇ ಮೊದಲ ವಿಕೆಟ್ ಪತನವಾಗಿದ್ದು, ಕಣ್ಣೀರಿಡುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ಘೋಷಿಸಿದ್ದಾರೆ.

ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸದನದ ಒಳಗೆ ಮತ್ತು ರಾಜ್ಯದ ಹಲವು ಕಡೆ ಪ್ರತಿಭಟನೆ ನಡೆಸಿದ್ದ ಬಿಜೆಪಿಯ ನಿರಂತರ ಹೋರಾಟಕ್ಕೆ ಜಯ ಸಿಕ್ಕಿದೆ. ಇಂದು ಮಧ್ಯಾಹ್ನ ದೆಹಲಿಯಿಂದ ಆಗಮಿಸಿದ ಬಳಿಕ ಸಂಜೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಾಗೇಂದ್ರ, ಮನುವಾದಿಗಳ ಕುತಂತ್ರದಿಂದ 3 ತಿಂಗಳು ಜೈಲಿಗೆ ಹೋಗಿದ್ದೆ ಎಂದು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ರು.

ಇನ್ನು ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ವಿರುದ್ಧವೂ ಪ್ರಕರಣ ಇದೆ. ಅವರಿಗೆ ಯಾಕೆ ಪ್ರಾಸಿಕ್ಯೂಷನ್​​ಗೆ ಕೇಳ್ತಿಲ್ಲ. ನಾನು ದಲಿತ ಅನ್ನುವ ಕಾರಣಕ್ಕೆ ರಾಜೀನಾಮೆ ಕೇಳ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ರು. ಇನ್ನು ನಾನು ನನ್ನ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡ್ತಿದ್ದೇನೆ ಎಂದಿದ್ದಾರೆ.

Comments (0)

Your email address will not be published. Required fields are marked *

Back to top button