#Exclusive NewsTop Newsಜಿಲ್ಲೆಫ್ರೀಡಂ ಟಿವಿ ವಿಶೇಷರಾಜಕೀಯವಿಶೇಷಸುದ್ದಿ

ನಾಡಿದ್ದು 2 ತಿಂಗಳ ಗೃಹಲಕ್ಷ್ಮೀ ಹಣ ಜಮೆ:ಲಕ್ಷ್ಮೀ ಹೆಬ್ಬಾಳ್ಕರ್‌

ಮೂಡಲಗಿ:ಕರ್ನಾಟಕದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಎಂದಿಗೂ ಬಂದ್ ಆಗುವುದಿಲ್ಲ. 2 ತಿಂಗಳ ಬಾಕಿ ಹಣವನ್ನು ಶೀಘ್ರ ಒಮ್ಮೆಗೆ ಖಾತೆ ಜಮೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು.ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ” ನಾನು ಈಗಾಗಲೇ ಹಲವು ಬಾರಿ ಗೃಹಲಕ್ಷ್ಮಿ ಬಗ್ಗೆ ಸ್ಪಷ್ಟನೆ ನೀಡಿದ್ದೇನೆ. ಮತ್ತೊಮ್ಮೆ ಸ್ಪಷ್ಟನೆ ಕೊಡುತ್ತಿದ್ದೇನೆ. ಗೃಹಲಕ್ಷ್ಮಿ ಹಣ ನಿತ್ಯ, ಸತ್ಯ, ನಿರಂತರ. ಕಳೆದೆರಡು ತಿಂಗಳಿಂದ ಬರದಿರುವ ಹಣ ಒಂದೇ ಬಾರಿ ಅಕೌಂಟ್‌ಗೆ ಪಾವತಿಯಾಗಲಿದೆ. ಲಿಂಗತ್ವ ಅಲ್ಪಸಂಖ್ಯಾತರಿಗೆ ಮೂರು ತಿಂಗಳ ಹಿಂದಷ್ಟೆ ಅರ್ಜಿ ಹಾಕಲು ಅವಕಾಶ ನೀಡಲಾಗಿತ್ತು. ಅವರಿಗೂ ಕೂಡ ಅಷ್ಟು ಬಾಕಿ ಹಣ ಒಟ್ಟಿಗೆ ಜಮಾ ಆಗಲಿದೆ ” ಎಂದು ಸ್ಪಷ್ಟಪಡಿಸಿದರು.

Comments (0)

Your email address will not be published. Required fields are marked *

Back to top button