ರಾಜಕೀಯ

ಚಾರ್ಜ್‌ಶೀಟ್‌ನಲ್ಲಿ ಜೆಡಿಎಸ್ ಕಾರ್ಯಕರ್ತರ ಹೆಸರು; ಶಾಸಕ ಸ್ವರೂಪ್ ಪ್ರಕಾಶ್ ಕೆಂಡಾಮಂಡಲ!

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣದ ಚಾರ್ಜ್‌ಶೀಟ್‌ನಲ್ಲಿ ಜೆಡಿಎಸ್ ಕಾರ್ಯಕರ್ತರ ಹೆಸರುಗಳನ್ನು ಸೇರ್ಪಡೆಗೊಳಿಸಿರುವುದಕ್ಕೆ ಶಾಸಕ ಸ್ವರೂಪ್ ಪ್ರಕಾಶ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಈ ಕ್ರಮವು ತನಿಖೆಯ ದಿಕ್ಕನ್ನು ತಪ್ಪಿಸುವ ವ್ಯವಸ್ಥಿತ ಪಿತೂರಿ ಎಂದು ಆರೋಪಿಸಿದ್ದಾರೆ.

ಪ್ರಕರಣದಲ್ಲಿ ಭಾಗಿಯಾಗಿರುವ ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸುವ ಉದ್ದೇಶದಿಂದ ಅವರ ಹೆಸರುಗಳನ್ನು ಕೈಬಿಡಲಾಗಿದೆ ಘಟನೆಯೊಂದಿಗೆ ಯಾವುದೇ ನೇರ ಸಂಬಂಧವಿಲ್ಲದ ಸುಮಾರು 10 ರಿಂದ 12 ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರನ್ನು ಅನಗತ್ಯವಾಗಿ ಸಿಲುಕಿಸುವ ಕೆಲಸ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.ಈ ಪ್ರಕರಣದ ಕುರಿತು ಸರ್ಕಾರವು ಉನ್ನತ ಮಟ್ಟದ ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಜನರ ಮುಂದೆ ತರಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಪಕ್ಷದ ಕಾರ್ಯಕರ್ತರು ಈ ಬೆಳವಣಿಗೆಯಿಂದ ಧೃತಿಗೆಡಬಾರದು ಮತ್ತು ಯಾವುದೇ ಆತಂಕಕ್ಕೆ ಒಳಗಾಗಬಾರದು ಸುಳ್ಳು ಆರೋಪಗಳ ವಿರುದ್ಧ ಕಾನೂನು ಹೋರಾಟ ನಡೆಸಲು ತವು ಸಿದ್ಧವಾಗಿರುವುದಾಗಿ ಎಂದು ಸ್ವರೂಪ್ ಪ್ರಕಾಶ್ ತಿಳಿಸಿದ್ದಾರೆ.

Comments (0)

Your email address will not be published. Required fields are marked *

Back to top button