ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈ ಎತ್ತಿ ಹೊಡೆಯಲು ಯತ್ನಿಸಿದ್ದರಿಂದ ಮುಜಗರಕ್ಕೆ ಒಳಗಾಗಿದ್ದ ಧಾರವಾಡ ಎಎಸ್‌ಪಿ ನಾರಾಯಣ ಬರಮನಿ ಅವರಿಗೆ ಸರ್ಕಾರ ಗುಡ್ನ್ಯೂಸ್ವೊಂದು ನೀಡಿದೆ.
ಬೆಳಗಾವಿ ಕಾರ್ಯಕ್ರಮವೊಂದರಲ್ಲಿ ಸಿಎಂ ಸಿದ್ದರಾಮಯ್ಯರಿಂದ ಅಮಾನಕ್ಕೀಡಾಗಿ ಸ್ವಯಂ ನಿವೃತ್ತಿಗೆ ಪತ್ರ ಬರೆದಿದ್ದ ಎಎಸ್‌ಪಿ ನಾರಾಯಣ ಬರಮನಿ ಅವರಿಗೆ ಸರ್ಕಾರ ಮುಂಬಡ್ತಿ ನೀಡಿದೆ. ಧಾರವಾಡ ಎಎಸ್‌ಪಿ ಆಗಿದ್ದ ನಾರಾಯಣ ಬರಮನಿಯವರನ್ನು ಬೆಳಗಾವಿ ಡಿಸಿಪಿಯಾಗಿ ನೇಮಕ ಮಾಡಿದೆ.
ಸಾರ್ವಜನಿಕ ವೇದಿಕೆಯಲ್ಲೇ ಹೆಚ್ಚುವರಿ ಎಎಸ್‌ಪಿ ನಾರಾಯಣ ಭರಮನಿ ಅವರಿಗೆ ಸಿಎಂ ಸಿದ್ದರಾಮಯ್ಯ ಕಪಾಳಮೋಕ್ಷ ಮಾಡಲು ಮುಂದಾಗಿದ್ದರು. ಇದರಿಂದ ಬರಮನಿ ಅವರು ಜೂನ್ 14ರಂದು ಸ್ವಯಂ ನಿವೃತ್ತಿಗಾಗಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ರಾಜ್ಯ ಸರ್ಕಾರ ಭಾರೀ ಟೀಕೆಗೆ ಗುರಿಯಾಗಿತ್ತು. ಕೊನೆಗೆ ನಾರಾಯಣ ಬರಮನಿ ಅವರನ್ನು ಸರ್ಕಾರ ಮೊನಮೊಲಿಸಿತ್ತು. ಬಳಿಕ ನಾರಾಯಣ ಬರಮನಿ ಕೆಲಸಕ್ಕೆ ಹಾಜರಾಗಿದ್ದರು. ಇದೀಗ ಅವರನ್ನು ಬೆಳಗಾವಿ ಡಿಸಿಪಿಯಾಗಿ ಮುಂಬಡ್ತಿ ನೀಡಿದೆ.