Top Newsರಾಜಕೀಯಸುದ್ದಿ

ನಾಳೆ ಸಂಜೆ 6 ಗಂಟೆಗೆ ಮೋದಿ ಪ್ರಧಾನಿಯಾಗಿ ಪ್ರಮಾಣವಚನ

ನವದೆಹಲಿ: ಜೂನ್ 9 ರ ಭಾನುವಾರ ಸಂಜೆ 6 ಗಂಟೆಗೆ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ನಾಯಕ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಇಂದು  ಸಂಸತ್‌ ಭವನದ ಸೆಂಟ್ರಲ್‌ ಹಾಲ್‌ನಲ್ಲಿ  NDA ಸಂಸದರ ಸಭೆ ನಡೆಯಿತು. ಈ ವೇಳೆ ಪ್ರಹ್ಲಾದ್‌ ಜೋಶಿ  ಜೂನ್‌ 9 ರಂದು ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದರು.

ಆರಂಭದಲ್ಲಿ ಶನಿವಾರ ಪ್ರಮಾಣ ವಚನ ನಡೆಯಲಿದೆ ಎಂದು ವರದಿಯಾಗಿತ್ತು. ಆದದರೆ  ಈಗ ಭಾನುವಾರ ಪ್ರಮಾಣ ವಚನ ನಡೆಯಲಿದೆ ಎನ್ನುವುದು ಅಧಿಕೃತವಾಗಿ ಪ್ರಕಟವಾಗಿದೆ. ಯಾರೆಲ್ಲ ಪ್ರಮಾಣ ವಚನ ನಡೆಸಲಿದ್ದಾರೆ ಎನ್ನುವುದು ತಿಳಿದು ಬಂದಿಲ್ಲ.

 

Comments (0)

Your email address will not be published. Required fields are marked *

Back to top button