Top Newsರಾಜ್ಯಸುದ್ದಿ

ಉಡುಪಿ : ಡಿಸಿ ಕಚೇರಿಯಲ್ಲಿ ಶರಣಾದ ನಕ್ಸಲ್ ತೊಂಬಟ್ಟು ಲಕ್ಷ್ಮೀ

ಉಡುಪಿ: ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮಚ್ಚಟ್ಟು ತೊಂಬಟ್ಟು ಗ್ರಾಮದ ನಕ್ಸಲ್ ಮಹಿಳೆ ಲಲಕ್ಷ್ಮೀ ಉಡುಪಿಯಲ್ಲಿ ಭಾನುವಾರ ಶರಣಾಗುವ ಮೂಲಕ ಮುಖ್ಯ ವಾಹಿನಿಗೆ ಬಂದಿದ್ದಾರೆ.

ಶರಣಾಗತಿಗೆ ಸಂಬಂಧಿಸಿದಂತೆ ಭಾನುವಾರ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಲಕ್ಷ್ಮೀ ತೊಂಬಟ್ಟು ಆಗಮಿಸಿ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿದಳು.

ಶರಣಾಗತಿ ಮತ್ತು ಪುನರ್ವಸತಿ ಸಮಿತಿಯ ಸದಸ್ಯ ಶ್ರೀಪಾಲ್ ಜೊತೆ ನಕ್ಸಲ್ ಲಕ್ಷ್ಮಿ, ಎಸ್‌ಪಿ ಕಚೇರಿಗೆ ಆಗಮಿಸಿದಳು. ಅಲ್ಲಿ ಶರಣಾಗತಿ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಲಾಯಿತು. ಬಳಿಕ ಭದ್ರತೆಯೊಂದಿಗೆ ಡಿಸಿ ಕಚೇರಿಗೆ ಲಕ್ಷ್ಮಿಯನ್ನು ಪೊಲೀಸರು ಕರೆದೊಯ್ದರು. ಶರಣಾದ ನಕ್ಸಲ್ ಜೊತೆ ಆಕೆಯ ಸಹೋದರ ಮತ್ತು ಬಂಧುಗಳು ಹಾಜರಿದ್ದರು. ಅಂತಿಮವಾಗಿ ಡಿಸಿ ಕಚೇರಿಯಲ್ಲಿ ಶರಣಾಗತಿ ಪಕ್ರಿಯೆ ಪೂರ್ಣಗೊಳಿಸಲಾಯಿತು.

Comments (0)

Your email address will not be published. Required fields are marked *

Back to top button