Freedom TV
ಸ್ಟಾರ್ ಆಗಲಿ, ಕೂಲಿ ಕಾರ್ಮಿಕನೇ ಆಗಲಿ ಒತ್ತಡಕ್ಕೂ ಮಣಿಯುವುದಿಲ್ಲ – ಲಕ್ಷ್ಮೀ ಹೆಬ್ಬಾಳಕರ್

ಉಡುಪಿ: ಸ್ಟಾರ್ ಆಗಲಿ, ಕೂಲಿ ಕಾರ್ಮಿಕನೇ ಆಗಲಿ. ಸರಕಾರ ಯಾರ ಒತ್ತಡಕ್ಕೂ ಮಣಿಯುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ನಟ ದರ್ಶನ್ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು, ಕಾನೂನಿನ ಎಲ್ಲರೂ ಒಂದೇ. ಯಾರನ್ನು ರಕ್ಷಿಸುವ ಪ್ರಶ್ನೆ ಇಲ್ಲ. ರಾಜ್ಯ ಸರ್ಕಾರ ಕೂಡ ಯಾರ ಪರ ನಿಲ್ಲುವುದಿಲ್ಲ ಎಂದರು.
ಕಡಲ ಕೊರೆತದ ಶಾಶ್ವತ ಪರಿಹಾರಕ್ಕಾಗಿ ಡಿಪಿಆರ್ ಸಿದ್ಧಪಡಿಸಲಾಗಿದ್ದು, ಇದಕ್ಕೆ ರಾಜ್ಯ ಸರ್ಕಾರದಿಂದ ಮಾತ್ರ ಪರಿಹಾರ ನೀಡಲು ಸಾಧ್ಯವಿಲ್ಲ.ಕೇಂದ್ರ ಮತ್ತು ರಾಜ್ಯ ಸರ್ಕಾರ ಸಮನ್ವಯತೆಯೊಂದಿಗೆ ಕೆಲಸ ಮಾಡಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.




