ರಾಜಕೀಯ
ʻಕೈʼ ಸರ್ಕಾರದ ನೂತನ ಸಚಿವರಿಗೆ ಒಲಿದ ಖಾತೆಗಳು – ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಭಾವ್ಯ ಪಟ್ಟಿ!
The portfolios allotted to the new ministers of the Congress government - who gets which portfolio? Here is the possible list!

ಬೆಂಗಳೂರು : ಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ನಡೆದ ಬೆನ್ನಲ್ಲೇ ಕಾಂಗ್ರೆಸ್ನಲ್ಲಿ ಅಸಮಾಧಾನದ ಕಿಚ್ಚು ಹೊತ್ತಿಕೊಂಡಿದೆ. ಸಚಿವ ಸ್ಥಾನ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದು ಅದು ಹುಸಿಯಾದ ಬೆನ್ನಲ್ಲೇ ಹಲವು ಶಾಸಕರು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ.
ಕೆಲವರು ಶಾಸಕ ಸ್ಥಾನ ಹಾಗೂ ನಿಗಮ-ಮಂಡಳಿ ಸ್ಥಾನಕ್ಕೆ ರಾಜೀನಾಮೆ ನೀಡುವ ಎಚ್ಚರಿಕೆ ನೀಡಿದ್ದಾರೆ. ಮತ್ತೊಂದೆಡೆ, ಶಾಸಕರ ಬೆಂಬಲಿಗರು ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನಡುವೆ ಯಾರಿಗೆ ಯಾವ ಖಾತೆ ದೊರೆಯಲಿದೆ ಎಂಬ ಸಂಭಾವ್ಯ ಪಟ್ಟಿ ಈಗ ಹೊರಬಿದ್ದಿದೆ.
ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಭಾವ್ಯ ಪಟ್ಟಿ!
- ಪಿ.ಎಂ. ನರೇಂದ್ರಸ್ವಾಮಿ – ಸಮಾಜಕಲ್ಯಾಣ ಇಲಾಖೆ
- ಬಸವರಾಜ ರಾಯರೆಡ್ಡಿ – ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ
- ಎಸ್.ಎಸ್. ಮಲ್ಲಿಕಾರ್ಜುನ್ – ತೋಟಗಾರಿಕೆ ಮತ್ತು ಗಣಿ ಹಾಗೂ ಭೂವಿಜ್ಞಾನ ಇಲಾಖೆ
- ಎನ್. ಚಲುವರಾಯಸ್ವಾಮಿ – ಕೃಷಿ ಇಲಾಖೆ
- ಕೆ.ಎಂ. ಶಿವಲಿಂಗೇಗೌಡ – ವಸತಿ ಇಲಾಖೆ
- ಲಕ್ಷ್ಮಣ ಸವದಿ – ಸಹಕಾರ ಮತ್ತು ಸಕ್ಕರೆ ಇಲಾಖೆ
- ಬಸವಂತಪ್ಪ – ಪೌರಾಡಳಿತ ಇಲಾಖೆ
- ಮಧು ಬಂಗಾರಪ್ಪ – ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ
- ಜಮೀರ್ ಅಹಮದ್ ಖಾನ್ – ವಕ್ಫ್, ಹಜ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ
- ವಿಜಯಾನಂದ ಕಾಶಪ್ಪನವರ್ – ಕೈಮಗ್ಗ ಮತ್ತು ಜವಳಿ ಇಲಾಖೆ
- ಡಾ. ಅಜಯ್ ಸಿಂಗ್ – ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ದಿಮೆ ಇಲಾಖೆ
- ರುದ್ರಪ್ಪ ಲಮಾಣಿ – ಅಬಕಾರಿ ಇಲಾಖೆ
- ಸಂತೋಷ್ ಲಾಡ್ – ಕಾರ್ಮಿಕ ಇಲಾಖೆ
- ಹೆಚ್.ಸಿ. ಬಾಲಕೃಷ್ಣ – ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ
- ರಿಜ್ವಾನ್ ಅರ್ಷದ್ – ಉನ್ನತ ಶಿಕ್ಷಣ ಇಲಾಖೆ
- ಸಿ. ಪುಟ್ಟರಂಗಶೆಟ್ಟಿ – ಪಶುಸಂಗೋಪನೆ ಹಾಗೂ ರೇಷ್ಮೆ ಇಲಾಖೆ
- ಬಿ. ನಾಗೇಂದ್ರ – ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ
- ಶಿವರಾಜ ತಂಗಡಗಿ – ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ
- ಟಿ. ರಘುಮೂರ್ತಿ – ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ




