Top Newsರಾಜಕೀಯರಾಜ್ಯಸುದ್ದಿ

ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗೆ ಜೆಡಿಎಸ್‌-ಬಿಜೆಪಿ ಸಿದ್ಧತೆ; ಬಿಜೆಪಿ ವರಿಷ್ಠರ ಜೊತೆ ಚರ್ಚೆ

ಬೆಂಗಳೂರು: ಮುಂದಿನ ದಿನಗಳಲ್ಲಿ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗಾಗಿ ಜೆಡಿಎಸ್‌ ಭರದ ಸಿದ್ಧತೆಯನ್ನು ಕೈಗೊಂಡಿದೆ. ಈಗಾಗಲೇ ವಿವಿಧ ವಿಷಯಗನ್ನು ಸಿದ್ಧತೆ ಮಾಡಿಕೊಂಡು ಇದರ ಬಗ್ಗೆ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು  ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಎನ್‌ಡಿಎ ಮೈತ್ರಿಕೂಟವನ್ನು ಮತ್ತಷ್ಟು ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಅಗತ್ಯ ಸಲಹೆ-ಸೂಚನೆ ಪಡೆದುಕೊಳ್ಳಲು ನಿಖಿಲ್ ಅವರು ಸೋಮವಾರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿಕೂಟ ಕಾಂಗ್ರೆಸ್ ಪಕ್ಷದ ವಿರುದ್ಧ ಪ್ರಬಲ ಹೋರಾಟ ನಡೆಸಿ ಉತ್ತಮ ಫಲಿತಾಂಶ ಸಾಧಿಸಿದೆ. ಜನತೆ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ನಂಬಿಕೆ ಇರಿಸಿದ್ದಾರೆ. ಇದನ್ನು ಉಳಿಸಿ ಬೆಳೆಸಿಕೊಂಡು ಹೋಗುವ ನಿಟ್ಟಿನಲ್ಲಿ ಒಟ್ಟಾಗಿ ಕೆಲಸ ಮಾಡುವ ಅಗತ್ಯ ಇದೆ ಎಂದು ನಿಖಿಲ್ ಅವರು ರಾಧಾ ಮೋಹನ್ ದಾಸ್ ಅಗರ್ವಾಲ್ ಅವರಿಗೆ ಹೇಳಿದ್ದಾರೆ.

Comments (0)

Your email address will not be published. Required fields are marked *

Back to top button